ಚಿಕ್ಕಬಳ್ಳಾಪುರ: ಸರಣಿ ಅಪಘಾತಕ್ಕೆ ವೃದ್ದ ಬಲಿ; ಆಟೋ ಛಿದ್ರ ಛಿದ್ರ
ಚಿಕ್ಕಬಳ್ಳಾಪುರ ಜಿಲ್ಲೆ ಭಾಗ್ಯನಗರ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದ ಸರಣಿ ಅಪಘಾತದಲ್ಲಿ ಓರ್ವ ವೃದ್ದ ಅಸುನೀಗಿದ್ದಾರೆ. ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ರಿಕ್ಷಾ ಬಸ್ಗೆ ಗುದ್ದಿದೆ. ಘಟನೆಯಲ್ಲಿ 10 ಜನ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗ್ತಿದೆ.
ಚಿಕ್ಕಬಳ್ಳಾಪುರ, ಡಿಸೆಂಬರ್ 09: ಲಾರಿ, ಬಸ್, ಆಟೋ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಓರ್ವ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಭಾಗ್ಯನಗರ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದಿದೆ. ಚಿಲುವೆಂದುಲ ಗ್ರಾಮದ 68 ವರ್ಷದ ವೃದ್ದ ಮೃತ ದುರ್ದೈವಿಯಾಗಿದ್ದಾರೆ. ಸುಂಕುಲಮ್ಮ ದೇಗುಲದಿಂದ ಬರುತ್ತಿದ್ದ ಆಟೋ ತಿರುವು ಪಡೆದುಕೊಳ್ಳುವ ವೇಳೆ ಲಾರಿ ಡಿಕ್ಕಿಯಾಗಿದೆ. ಈ ವೇಳೆ ಡಿಕ್ಕಿಯ ರಭಸಕ್ಕೆ ಪಲ್ಟಿಯಾದ ಆಟೋ ಬಸ್ಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ವೃದ್ದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 10 ಜನರಿಗೆ ಘಟನೆಯಲ್ಲಿ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Dec 09, 2025 07:29 PM

