Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿರುವ ರೈಲು ಹತ್ತಲು ಹೋಗಿ ನಿಯಂತ್ರಣ ಕಳೆದುಕೊಂಡ ವೃದ್ಧ: ಆಮೇಲೇನಾಯ್ತು ನೋಡಿ

ಚಲಿಸುತ್ತಿರುವ ರೈಲು ಹತ್ತಲು ಹೋಗಿ ನಿಯಂತ್ರಣ ಕಳೆದುಕೊಂಡ ವೃದ್ಧ: ಆಮೇಲೇನಾಯ್ತು ನೋಡಿ

ಗಂಗಾಧರ​ ಬ. ಸಾಬೋಜಿ
| Updated By: Digi Tech Desk

Updated on:Apr 04, 2025 | 11:54 AM

ಮಂಗಳೂರಿನ ಸುರತ್ಕಲ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಹತ್ತಲು ಹೋಗಿ ನಿಯಂತ್ರಣ ಕಳೆದುಕೊಂಡ ವೃದ್ಧನನ್ನು ರಕ್ಷಣೆ ಮಾಡಿರುವಂತಹ ಘಟನೆ ನಡೆದಿದೆ. ರೈಲ್ವೆ ಸಿಬ್ಬಂದಿಗಳ ಸಮಯಪ್ರಜ್ಞೆಯಿಂದ ವೃದ್ಧನನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಈ ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವೃದ್ಧನನ್ನು ರಕ್ಷಿಸಿದ ಸಿಬ್ಬಂದಿಗೆಳಿಗೆ ಪ್ರಶಂಸೆ ವ್ಯಕ್ತವಾಗಿದೆ.

ಮಂಗಳೂರು, ಏಪ್ರಿಲ್​ 04: ರೈಲು (train) ಹತ್ತಲು ಹೋಗಿ ನಿಯಂತ್ರಣ ಕಳೆದುಕೊಂಡ ವೃದ್ದನನ್ನು ರಕ್ಷಣೆ ಮಾಡಿರುವಂತಹ ಘಟನೆ ಮಂಗಳೂರಿನ ಸುರತ್ಕಲ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಚಲಿಸುತ್ತಿದ್ದ ರೈಲನ್ನು ಏಕಾಏಕಿ ಹತ್ತಲು ವೃದ್ದ ಮುಂದಾಗಿದ್ದಾರೆ. ಈ ವೇಳೆ ರೈಲು ವೇಗ ಪಡೆದುಕೊಂಡಿದ್ದು, ಇತ್ತ ವೃದ್ಧ ನಿಯಂತ್ರಣ ಕಳೆದುಕೊಂಡಿದ್ದಾರೆ. ರೈಲಿನಿಂದ ಕೆಳಗೆ ಬೀಳುವಷ್ಟರಲ್ಲಿ ರೈಲ್ವೆ ಸಿಬ್ಬಂದಿಯಿಂದ ವೃದ್ದನ ರಕ್ಷಣೆ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Apr 04, 2025 11:27 AM