ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು ವಿಡಿಯೋ ನೋಡಿ

ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು ವಿಡಿಯೋ ನೋಡಿ

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Dec 02, 2024 | 6:15 PM

ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಮರಕಟ್ಲೆ ಗ್ರಾಮದಲ್ಲಿ ನೀರು ಸೇದುವಾಗ 60 ಅಡಿ ಆಳದ ಬಾವಿಗೆ ಬಿದ್ದ ವೃದ್ಧೆ ಕಮಲಾ ಅವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಹಗ್ಗದ ಸಹಾಯದಿಂದ ರಕ್ಷಣಾ ಕಾರ್ಯ ನಡೆಸಲಾಗಿದೆ. ಗಾಯಗೊಂಡ ವೃದ್ಧೆಗೆ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಚಿಕ್ಕಮಗಳೂರು, ಡಿಸೆಂಬರ್​ 02: ನೀರು ಸೇದುವಾಗ ಏಕಾಏಕಿ 60 ಅಡಿ ಆಳದ ಬಾವಿಗೆ ಬಿದ್ದಿದ್ದ 94 ವರ್ಷದ ವೃದ್ಧೆಯನ್ನು (Elderly Woman) ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣೆ ಮಾಡಿರುವಂತಹ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಮರಕಟ್ಲೆ ಗ್ರಾಮದಲ್ಲಿ ನಡೆದಿದೆ. ಬಾವಿಗೆ ಬಿದ್ದಿದ್ದ ವೃದ್ಧೆ ಕಮಲಾರನ್ನ ಹಗ್ಗದ ಸಹಾಯದಿಂದ ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಗಾಯಾಳು ವೃದ್ಧೆಗೆ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.