Video: ಅಣ್ಣಾಮಲೈ ಮಾತಿಗೆ ಭಾವುಕರಾಗಿ ವೇದಿಕೆಯ ಮೇಲೆ ಕಣ್ಣೀರು ಹಾಕಿದ ಜಿಗಜಿಣಗಿ

ವಿಜಯಪುರ ಲೋಕಸಭಾ ಬಿಜೆಪಿ ಅಭ್ಯರ್ಥಿ ರಮೇಶ್​ ಜಿಗಜಿಣಗಿ ಪರ ತಮಿಳುನಾಡು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿರುವ ಅಣ್ಣಾಮಲೈ ಅವರು ಅಬ್ಬರದ ಮತಪ್ರಚಾರ ಮಾಡಿದರು. ಈ ವೇಳೆ ಮಾತನಾಡಿದ ಅಣ್ಣಾಮಲೈ ಬಿಜೆಪಿಯ ಸಾಧನೆ ಹಾಗೂ ರಮೇಶ್ ಜಿಗಜಿಣಗಿ ಕಾರ್ಯಗಳ ಬಗ್ಗೆ ಜನರಿಗೆ ತಿಳಿಸಿದರು. ಅಣ್ಣಾಮಲೈ ಅವರ ಮಾತುಗಳನ್ನು ಕೇಳುತ್ತಿದ್ದಂತೆ ಭಾವುಕರಾಗಿ ವೇದಿಕೆಯ ಮೇಲೆ ಜಿಗಜಿಣಗಿ ಕಣ್ಣೀರು ಹಾಕಿದರು.

Follow us
ಅಕ್ಷತಾ ವರ್ಕಾಡಿ
|

Updated on:May 03, 2024 | 10:30 AM

ವಿಜಯಪುರ(ಮೇ.03): ತಮಿಳುನಾಡು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿರುವ ಅಣ್ಣಾಮಲೈ ಅವರು ನಿನ್ನೆ (ಮೇ.02)ರಂದು ವಿಜಯಪುರ ಲೋಕಸಭಾ ಬಿಜೆಪಿ ಅಭ್ಯರ್ಥಿ ರಮೇಶ್​ ಜಿಗಜಿಣಗಿ ಪರ ಭರ್ಜರಿ ಮತಪ್ರಚಾರ ನಡೆಸಿದರು. ನಗರದ ಮೀನಾಕ್ಷಿ ಚೌಕಿಯಲ್ಲಿ ನಡೆದ ಬಿಜೆಪಿ ಯುವ ಸಮಾವೇಶದಲ್ಲಿ ಮಾತನಾಡಿದ ಅಣ್ಣಾಮಲೈ ಬಿಜೆಪಿಯ ಸಾಧನೆ ಹಾಗೂ ರಮೇಶ್ ಜಿಗಜಿಣಗಿ ಕಾರ್ಯಗಳ ಬಗ್ಗೆ ಜನರಿಗೆ ತಿಳಿಸಿದರು. ವಿಜಯಪುರದಲ್ಲಿ ಬೈಕ್ ರ್ಯಾಲಿ, ಸಾರ್ವಜನಿಕ ಸಭೆಗಳಲ್ಲಿ ಪಾಲ್ಗೊಳ್ಳುವುದಕ್ಕೂ ಮೊದಲು ಮಾತನಾಡಿರುವ ಅಣ್ಣಾಮಲೈ, ಲೋಕಸಭೆ ಚುನಾವಣೆಯಲ್ಲಿ ಮೋದಿಜೀ ಪ್ರಧಾನಿಯಾಗಲು ನೀವು ಬಯಸಿದರೆ, ಭವಿಷ್ಯದಲ್ಲಿ ಉತ್ತಮ ಭಾರತಕ್ಕಾಗಿ ವಿಜಯಪುರದಲ್ಲಿ ಜಿಗಜಿಣಗಿ ಅವರಿಗೆ ನಿಮ್ಮ ಅತ್ಯಮೂಲ್ಯವಾದ ಮತ ನೀಡಿ ಎಂದು ಹೇಳಿದರು. ಈ ವೇಳೆ ಅಣ್ಣಾಮಲೈ ಮಾತಿಗೆ ಭಾವುಕರಾದ ರಮೇಶ್ ಜಿಗಜಿಣಗಿ ವೇದಿಕೆಯ ಮೇಲೆ ಕಣ್ಣೀರು ಹಾಕಿದ್ದಾರೆ. BLDE ಇಂಜಿನಿಯರಿಂಗ್ ಕಾಲೇಜಿನಿಂದ ತೆರೆದ ವಾಹನದಲ್ಲಿ ಜಿಗಜಿಣಗಿ ಪರ ಅಣ್ಣಾಮಲೈ ಮತಯಾಚನೆ ಮಾಡಿದರು. ಇದಲ್ಲದೆ ಸಿದ್ದೇಶ್ವರ ಆಶ್ರಮಕ್ಕೆ ಭೇಟಿ ನೀಡಿ ಆರ್ಶೀವಾದ ಪಡೆದ ಅಣ್ಣಾಮಲೈ ಭಾರತದ ದಕ್ಷಿಣ ಪ್ರದೇಶಗಳಲ್ಲೂ ಬಿಜೆಪಿನ್ನು ಜನತೆ ಒಪ್ಪುತ್ತಿದ್ದು, ಈ ಪ್ರದೇಶದಲ್ಲಿ ಪಕ್ಷ 110 ರಿಂದ 160 ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ನಮ್ಮ ಗಂಡು ನರೇಂದ್ರ ಮೋದಿ, ಕಾಂಗ್ರೆಸ್ ನಲ್ಲಿ ಮದುವೆ ಗಂಡು ಇಲ್ಲ: ಸಿಟಿ ರವಿ

Published On - 10:27 am, Fri, 3 May 24

ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​
ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ
ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ
Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು