AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assembly Polls: ರಾಜ್ಯ ವಿಧಾನಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟ, ಮೇ 10ರಂದು ಮತದಾನ, ಮತಗಳ ಎಣಿಕೆ ಮೇ 13

Assembly Polls: ರಾಜ್ಯ ವಿಧಾನಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟ, ಮೇ 10ರಂದು ಮತದಾನ, ಮತಗಳ ಎಣಿಕೆ ಮೇ 13

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Mar 29, 2023 | 1:41 PM

Share

ನಾಮಪತ್ರಗಳನ್ನು ಸಲ್ಲಿಸುವ ಕೊನೆಯ ದಿನ ಏಪ್ರಿಲ್ 20 ಮತ್ತು ಅವುಗಳ ಪರಿಶೀಲನೆ ಏಪ್ರಿಲ್ 21 ರಂದು ನಡೆಯಲಿದೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್ 24 ಆಗಿರುತ್ತದೆ.

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ (Election Commission) ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ (Rajiv Kumar) ದೆಹಲಿಯಲ್ಲಿ ಇಂದು ಸುದ್ದಿಗೋಷ್ಟಿಯಲ್ಲಿ ಪ್ರಕಟಿಸಿದಂತೆ ರಾಜ್ಯದಲ್ಲಿ ಮೇ 10 ರಂದು ಒಂದೇ ಹಂತದ ಚುನಾವಣೆ ನಡೆಯಲಿದೆ. ಚುನಾವಣೆಗೆ ಸಂಬಂಧಿಸಿದ ಗೆಜೆಟ್ ಅಧಿಸೂಚನೆ (gazette notification) ಏಪ್ರಿಲ್ 13 ರಂದು ಬಿಡುಗಡೆಯಾಗಲಿದೆ. ನಾಮಪತ್ರಗಳನ್ನು ಸಲ್ಲಿಸುವ ಕೊನೆಯ ದಿನ ಏಪ್ರಿಲ್ 20 ಮತ್ತು ಅವುಗಳ ಪರಿಶೀಲನೆ ಏಪ್ರಿಲ್ 21 ರಂದು ನಡೆಯಲಿದೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್ 24 ಆಗಿರುತ್ತದೆ. ಮತಗಳ ಎಣಿಕೆ ಕಾರ್ಯ ಮೇ 13 ರಂದು ನಡೆಯಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 29, 2023 01:40 PM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.