AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಬಿಎ ಚುನಾವಣೆಗೆ ಇವಿಎಂ ಬದಲಿಗೆ ಮತಪತ್ರ: ಪರ-ವಿರೋಧ ಚರ್ಚೆಗೆ ಕಾರಣವಾದ ಆಯೋಗದ ನಿರ್ಧಾರ

ಜಿಬಿಎ ಚುನಾವಣೆಗೆ ಇವಿಎಂ ಬದಲಿಗೆ ಮತಪತ್ರ: ಪರ-ವಿರೋಧ ಚರ್ಚೆಗೆ ಕಾರಣವಾದ ಆಯೋಗದ ನಿರ್ಧಾರ

ಪ್ರಸನ್ನ ಹೆಗಡೆ
|

Updated on: Jan 19, 2026 | 2:44 PM

Share

ಚುನಾವಣಾ ಆಯೋಗವು ಜಿಬಿಎ ಚುನಾವಣೆಗಳಿಗೆ ಇವಿಎಂ ಬದಲಿಗೆ ಮತಪತ್ರ ಬಳಸಲು ನಿರ್ಧರಿಸಿದೆ. ಮೇ 25ರ ನಂತರ ನಡೆಯುವ ಈ ಚುನಾವಣೆಗಳಿಗೆ ಬ್ಯಾಲೆಟ್ ಪೇಪರ್ ಬಳಕೆ ಕುರಿತು ಈಗಾಗಲೇ ಚರ್ಚೆ ನಡೆದಿತ್ತು. ಸ್ವತಂತ್ರ ಸಂಸ್ಥೆಯಾಗಿ ಆಯೋಗದ ಈ ನಿರ್ಧಾರವು ಸಾರ್ವಜನಿಕ ನಂಬಿಕೆ ಮತ್ತು ಕಾಂಗ್ರೆಸ್ ಆರೋಪಗಳ ಹಿನ್ನೆಲೆಯಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಸುಪ್ರೀಂ ಕೋರ್ಟ್ ಬ್ಯಾಲೆಟ್ ಪೇಪರ್‌ಗಳನ್ನು ನಿಷೇಧಿಸಿಲ್ಲ ಎಂದು ಆಯೋಗ ತಿಳಿಸಿದೆ.

ಬೆಂಗಳೂರು, ಜನವರಿ 19: ಚುನಾವಣಾ ಆಯೋಗವು ಜಿಬಿಎ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್‌ಗಳ ಮೂಲಕ ನಡೆಸಲು ನಿರ್ಧರಿಸಿದೆ. ಮೇ 25ರ ನಂತರ ನಡೆಯಲಿರುವ ಈ ಚುನಾವಣೆಗಳಲ್ಲಿ ಮತಪತ್ರಗಳ ಬಳಕೆಗೆ ಚುನಾವಣಾ ಆಯೋಗವು ತನ್ನದೇ ಆದ ಕಾರಣಗಳನ್ನು ನೀಡಿದ್ದು, ಬ್ಯಾಲೆಟ್ ಪೇಪರ್‌ಗಳನ್ನು ಬಳಸಬಾರದು ಎಂದು ಸುಪ್ರೀಂ ಕೋರ್ಟ್ ಎಲ್ಲಿಯೂ ಹೇಳಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ. ಅಲ್ಲದೆ, ಚುನಾವಣಾ ಆಯೋಗವು ಒಂದು ಸ್ವತಂತ್ರ ಸಂಸ್ಥೆಯಾಗಿದ್ದು, ಮತಪತ್ರಗಳ ಬಳಕೆ ತಮ್ಮ ನಿರ್ಧಾರ ಎಂದು ತಿಳಿಸಿದೆ. ಆದಾಗ್ಯೂ ಈ ಕ್ರಮವು ಹೊಸ ಚರ್ಚೆಗೆ ಕಾರಣವಾಗಿದೆ. ಇವಿಎಂ ವ್ಯವಸ್ಥೆಯ ಮೇಲೆ ಸಾರ್ವಜನಿಕರಲ್ಲಿ ಮೂಡಿರುವ ನಂಬಿಕೆಗೆ ಇದು ಧಕ್ಕೆ ತರುತ್ತದೆಯೇ ಎಂಬ ಪ್ರಶ್ನೆ ಎದ್ದಿದೆ. ಕಾಂಗ್ರೆಸ್ ಪಕ್ಷವು ಇವಿಎಂ ಕುರಿತು ನಿರಂತರವಾಗಿ ಆರೋಪಗಳನ್ನು ಮಾಡುತ್ತಿದ್ದು, ಈ ನಿರ್ಧಾರವು ಅದಕ್ಕೆ ಪುಷ್ಟಿ ನೀಡಿದಂತಾಗಬಹುದು ಎಂಬ ಚರ್ಚೆ ನಡೆಯುತ್ತಿದೆ. ಹಿಂದಿನ ಬಿಬಿಎಂಪಿ ಚುನಾವಣೆಗಳಲ್ಲಿ ಇವಿಎಂ ಬಳಸಲಾಗಿತ್ತು ಎಂಬ ಅಂಶವೂ ಇಲ್ಲಿ ಗಮನಾರ್ಹ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.