ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ರಾಜ್ಯಾಧ್ಯಕ್ಷನ ಚುನಾವಣೆ ಬಗ್ಗೆ ಚರ್ಚೆ ಆಗಿಲ್ಲ: ಆರ್ ಅಶೋಕ
ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಲು ಬಿಜೆಪಿ ಎರಡು ವಿಧಾನಗಳನ್ನು ಅನುಸರಿಸುತ್ತದೆ, ಸರ್ವಸಮ್ಮತಿಯ ಆಯ್ಕೆ ಮತ್ತು ಚುನಾವಣೆ ಎಂದು ಅಶೋಕ ಹೇಳಿದರು. ಯಾವುದಕ್ಕೂ ಶಿವರಾಜ್ ಸಿಂಗ್ ಚೌಹಾನ್ ಅವರ ನಿರ್ಣಯವೇ ಅಂತಿಮವಾಗಿರುತ್ತದೆ, ಅವರು ಆಯ್ಕೆ ಮಾಡಿ ಅನುಮೋದನೆಗಾಗಿ ವರಿಷ್ಠರಿಗೆ ಕಳಿಸುತ್ತಾರೆ, ವರಿಷ್ಠರು ತೆಗೆದುಕೊಳ್ಳುವ ನಿರ್ಣಯವನ್ನು ಶಿರಸಾವಹಿಸಿ ಪಾಲಿಸುತ್ತೇವೆ ಎಂದು ಅಶೋಕ ಹೇಳಿದರು.
ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ದಾಸ್ ಅಗರ್ವಾಲ್ ನೇತೃತ್ವದಲ್ಲಿ ನಡೆದ ಚುನಾಯಿತ ಪ್ರತಿನಿಧಿಗಳ ಸಭೆಯ ನಂತರ ಮಾತಾಡಿದ ಅರ್ ಅಶೋಕ, ಪಕ್ಷ ಸಂಘಟನೆ, ಜಿಲ್ಲಾಧ್ಯಕ್ಷರು ಮತ್ತು ತಾಲ್ಲೂಕು ಮಟ್ಟದ ಪದಾಧಿಕಾರಿಗಳ ಚುನಾವಣೆಗೆ ಸಂಬಂಧಿಸಿದಂತೆ ಮಾತ್ರ ಚರ್ಚೆ ನಡೆಯಿತು, ರಾಜ್ಯಾಧ್ಯಕ್ಷರ ನೇಮಕಾತಿ ಅಥವಾ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆದಿಲ್ಲ, ರಾಜ್ಯಾಧ್ಯಕ್ಷರ ಚುನಾವಣೆಗೆಂದು ವರಿಷ್ಠರು ಶಿವರಾಜ್ ಸಿಂಗ್ ಚೌಹಾನ್ ಅವರನ್ನು ಉಸ್ತುವಾರಿಯಾಗಿ ನೇಮಿಸಿದ್ದಾರೆ ಅವರು ಬಂದ ಮೇಲೆ ಪ್ರಕ್ರಿಯೆ ಶುರುವಾಗುತ್ತದೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಈಗಿರುವ ಗಾಂಧಿಗಳು ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆಯೇ? ನಕಲಿ ಗಾಂಧಿಗಳ ಜಾತ್ರೆ ನಡೆಯುತ್ತಿದೆ: ಅಶೋಕ
Latest Videos