‘ಚುನಾವಣಾ ವ್ಯವಸ್ಥೆ ಹದಗೆಟ್ಟಿದೆ’: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್

Edited By:

Updated on: Sep 20, 2026 | 7:58 PM

ಚುನಾವಣಾ ವ್ಯವಸ್ಥೆ ಹದಗೆಟ್ಟಿದೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ ಪ್ರತಿಕ್ರಿಯಿಸಿದ್ದಾರೆ. ಈ ವ್ಯವಸ್ಥೆಯಲ್ಲಿ ಭಾಗವಹಿಸಿರುವವರು ಮೊದಲೇ ದೂರವಿರಬೇಕಿತ್ತು ಎಂದ ಮಹದೇವಪ್ಪ, ಪ್ರಜಾಪ್ರಭುತ್ವ ಸುಧಾರಣೆಗೆ ಚುನಾವಣಾ ಆಯೋಗ, ರಾಜ್ಯ ಚುನಾವಣಾ ನಿಧಿ ಹಾಗೂ ಮತದಾರರು ಪ್ರಮುಖ ಪಾತ್ರ ವಹಿಸಬೇಕು ಎಂದು ಕರೆ ನೀಡಿದ್ದಾರೆ. ಹಣಕ್ಕಾಗಿ ಮತ ಮಾರಾಟ ಮಾಡದಂತೆ ಮತದಾರರಿಗೆ ಮನವಿ ಮಾಡಿದ್ದಾರೆ.

ದಾವಣಗೆರೆ, ಸೆಪ್ಟೆಂಬರ್​​ 20: ಚುನಾವಣಾ ವ್ಯವಸ್ಥೆ ಹದಗೆಟ್ಟಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ ಟಾಂಗ್ ಕೊಟ್ಟಿದ್ದಾರೆ. ಈ ರೀತಿಯಾಗಿ ಹೇಳುವವರು ಮೊದಲೇ ಇಂಥ ಚುನಾವಣಾ ವ್ಯವಸ್ಥೆಯಿಂದ ದೂರ ಇರಬೇಕಿತ್ತು. ನಾವು ಈಗಾಗಲೇ ಇಂತಹ ವ್ಯವಸ್ಥೆಯಲ್ಲಿ ಬಂದು ಬಿಟ್ಟಿದ್ದೇವೆ. ಸಂವಿಧಾನ ಜಾರಿ ಬಂದಾಗಲೇ‌ ಕೃಪಲಾನಿಯಂತವರು ಅಂಬೇಡ್ಕರ್​​ಗೆ ಪ್ರಶ್ನೆ ಮಾಡಿದ್ದರು. ಹಣ ಕೊಟ್ಟು ಮತ ಖರೀದಿಸುತ್ತೇವೆ ಎಂದಿದ್ದರು. ಇಂತಹ ಚಿಂತನೆಗಳು ‌ಮೊದಲಿನಿಂದಲು ನಡೆದುಕೊಂಡು ಬಂದಿವೆ. ಇದು ಸುಧಾರಣೆ ಆಗಬೇಕಿದ್ದರೆ ಚುನಾವಣಾ ಆಯೋಗ ಮಹತ್ವದ ಹೆಜ್ಜೆ ಇಡಬೇಕು ಎಂದವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More