ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಸ್ಥಳೀಯ ಸಂಘ ಸಂಸ್ಥೆಗಳಿಗೆ ಚುನಾವಣೆ ನಡೆಸುತ್ತೇವೆ: ಸಿದ್ದರಾಮಯ್ಯ

|

Updated on: May 24, 2024 | 2:05 PM

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯತೀಂದ್ರ ತಮಗಾಗಿ ವರುಣ ಕ್ಷೇತ್ರ ಬಿಟ್ಟುಕೊಟ್ಟಾಗಲೇ ಪಕ್ಷದ ಹೈಕಮಾಂಡ್ ಅವರನ್ನು ವಿಧಾನ ಪರಿಷತ್ ಸದಸ್ಯನಾಗಿ ಮಾಡುವ ಭರವಸೆ ನೀಡಿತ್ತು, ಈಗಲೂ ಅದು ಹೈಕಮಾಂಡ್​ಗೆ ಬಿಟ್ಟ ವಿಚಾರ ಎಂದು ಸಿದ್ದರಾಮಯ್ಯ ಹೇಳಿದರು.

ಮೈಸೂರು: ನಗರದ ಮೈಲಾರಿ ಹೋಟೆಲ್ ನಲ್ಲಿ ತಿಂಡಿ ಸವಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಆ ಹೋಟೆಲ್​ಗೆ ತಿಂಡಿ ತಿನ್ನಲು ಹೋಗೋದು ನಿನ್ನೆಯೇ ಪ್ಲ್ಯಾನ್ ಅಗಿತ್ತು ಎಂದು ಹೇಳಿದರು. ಸ್ಥಳೀಯ ಸಂಘಸಂಸ್ಥೆಗಳಿಗೆ (local bodies) ಸರ್ಕಾರ ಚುನಾವಣೆ ನಡೆಸದಿದ್ದರೆ ಹೈಕೋರ್ಟ್ ಕದ ತಟ್ಟುವುದಾಗಿ ಚುನಾವಣಾ ಆಯೋಗ (Election Commission) ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಲೋಕಸಭಾ ಚುನಾವಣೆಯ ಫಲಿತಾಂಶಗಳು ಪ್ರಕಟವಾದ ನಂತರ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್​ಗಳಿಗೆ ಚುನಾವಣೆ ನಡೆಸಲಾಗುವುದು ಮತ್ತು ಡಿಲಿಮಿಟೇಶನ್ ಪ್ರಕ್ರಿಯೆ ಮುಗಿದ ಬಳಿಕ ಬೃಹತ್ ಬೆಂಗಳೂರು ಮಹಾನಹರ ಪಾಲಿಕೆಗೂ ಚುನಾವಣೆಗಳನ್ನು ನಡೆಸಲಾಗುವುದು ಎಂದು ಹೇಳಿದರು. ಯತೀಂದ್ರ ಸಿದ್ದರಾಮಯ್ಯರನ್ನು ವಿಧಾನ ಪರಿಷತ್ ಸದಸ್ಯ ಮಾಡುವ ಬಗ್ಗೆ ಹಬ್ಬಿರುವ ವದಂತಿಗಳಿಗೆ ಸ್ಪಷ್ಟನೆ ನೀಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯತೀಂದ್ರ ತಮಗಾಗಿ ವರುಣ ಕ್ಷೇತ್ರ ಬಿಟ್ಟುಕೊಟ್ಟಾಗಲೇ ಪಕ್ಷದ ಹೈಕಮಾಂಡ್ ಅವರನ್ನು ವಿಧಾನ ಪರಿಷತ್ ಸದಸ್ಯನಾಗಿ ಮಾಡುವ ಭರವಸೆ ನೀಡಿತ್ತು, ಈಗಲೂ ಅದು ಹೈಕಮಾಂಡ್​ಗೆ ಬಿಟ್ಟ ವಿಚಾರ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿಮೊದಲ ಬಾರಿಗೆ ತಮ್ಮ ಒನ್‌ಸೈಡ್ ಲವ್‌ ಸ್ಟೋರಿ ರಿವೀಲ್ ಮಾಡಿದ ಸಿದ್ದರಾಮಯ್ಯ