Video: ಎಲೆಕ್ಟ್ರಾನಿಕ್ ಸಿಟಿ ಜನರೇ ಇಲ್ಲಿ ಗಮನಿಸಿ, ಇಂದು ಸಂಜೆಯಿಂದ ಈ ರಸ್ತೆ ಬಂದ್
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಅಪಘಾತಗಳನ್ನು ತಡೆಯಲು ಬೆಂಗಳೂರಿನ ಅತಿ ಉದ್ದದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಇಂದು ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯವರೆಗೆ ಬಂದ್ ಆಗಲಿದೆ. ಬೈಕ್, ಕಾರು, ಬಸ್ ಸೇರಿದಂತೆ ಎಲ್ಲಾ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದ್ದು, ಪ್ರಯಾಣಿಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಮನವಿ ಮಾಡಿದ್ದಾರೆ.
ಬೆಂಗಳೂರು, ಡಿ. 31: ಬೆಂಗಳೂರಿನ ಅತಿ ಉದ್ದದ ಪ್ಲೈ ಓವರ್ ಆಗಿರುವ ಎಲೆಕ್ಟ್ರಾನಿಕ್ ಸಿಟಿ ಪ್ಲೈ ಓವರ್ ಇಂದು ಬಂದ್ ಆಗಲಿದೆ. ಸಿಲ್ಕ್ ಬೋರ್ಡ್ನಿಂದ ಎಲೆಕ್ಟ್ರಾನಿಕ್ ಸಿಟಿವರೆಗೆ ಇರುವ 9 ಕಿ.ಲೋ ಮೀಟರ್ ಉದ್ದವಾಗಿರುವ ಈ ಪ್ಲೈ ಓವರ್ ಹೊಸ ವರ್ಷದ ಪ್ರಯುಕ್ತ ಕ್ಲೋಸ್ ಮಾಡಲಾಗುವುದು. ಇಂದು ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆವರೆಗೆ ಈ ಪ್ಲೈ ಓವರ್ ಬಂದ್ ಮಾಡಲಾಗುವುದು ಎಂದು ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗ ಪೊಲೀಸರು ಮನವಿ ಮಾಡಿದ್ದಾರೆ. ಬೈಕ್, ಕಾರು, ಬಸ್ ಟ್ರಕ್ ಎಲ್ಲಾ ವಾಹನಗಳಿಗೆ ನಿರ್ಬಂಧ ಮಾಡಲಾಗಿದೆ. ಹೊಸ ವರ್ಷಾಚರಣೆ ನಶೆಯಲ್ಲಿ ಅಪಘಾತಗಳು ಆಗುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಈ ಪ್ಲೈ ಓವರ್ ಬಂದ್ ಮಾಡಲಾಗುತ್ತದೆ ಎಂದು ಹೇಳಲಾಗಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Dec 31, 2025 02:44 PM