ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್
ಮೈಸೂರು ಜಿಲ್ಲೆಯ ಕಬಿನಿ ಹಿನ್ನೀರಿನಲ್ಲಿ ಒಂಟಿ ಸಲಗವೊಂದು ಹುಲಿಯನ್ನು ಅಟ್ಟಾಡಿಸಿದ ಅಪರೂಪದ ದೃಶ್ಯ ಪ್ರವಾಸಿಗರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಲಗದ ಧೈರ್ಯಕ್ಕೆ ಎಲ್ಲರೂ ಆಶ್ಚರ್ಯ ವ್ಯಕ್ತಪಡಿಸುತ್ತಿದ್ದಾರೆ. ಸಫಾರಿಗೆ ತೆರಳಿದ್ದ ವೇಳೆ ಕಂಡ ಈ ಅಪರೂಪದ ಘಟನೆಯಿಂದ ಪ್ರವಾಸಿಗರು ಖುಷ್ ಆಗಿದ್ದಾರೆ.
ಮೈಸೂರು, ಏಪ್ರಿಲ್ 21: ಕಾಡಿನಲ್ಲಿ ಹುಲಿಯನ್ನು ಆನೆಯೊಂದು (Elephant) ಅಟ್ಟಾಡಿಸಿರುವಂತಹ ಅಪರೂಪದ ವಿಡಿಯೋ ವೈರಲ್ ಆಗಿದೆ. ಹೆಚ್.ಡಿ.ಕೋಟೆ ತಾಲೂಕು ಕಬಿನಿ ಹಿನ್ನೀರಿನಲ್ಲಿ ಈ ಅಪರೂಪದ ದೃಶ್ಯ ಕಂಡುಬಂದಿದ್ದು, ಸಫಾರಿಗೆ ತೆರಳಿದ್ದ ಪ್ರವಾಸಿಗರ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ಸಲಗದ ಆರ್ಭಟಕ್ಕೆ ಹುಲಿರಾಯ ಬೆದರಿ ಓಡಿದಿದೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Apr 21, 2025 10:03 AM