ಹಾಸನ: ಬೆಳ್ಳಂಬೆಳಿಗ್ಗೆ ಗ್ರಾಮದೊಳಗೆ ಎಂಟ್ರಿ ಕೊಟ್ಟ ಒಂಟಿ ಸಲಗ, ಭಯಭೀತರಾದ ಗ್ರಾಮಸ್ಥರು
ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದೆ. ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದೊಳಗೆ ಬೆಳ್ಳಂಬೆಳಿಗ್ಗೆ ಒಂಟಿ ಸಲಗವೊಂದು ಬಂದಿದೆ. ಕಾಡಾನೆ ಕಂಡು ಗ್ರಾಮಸ್ಥರು ಭಯ ಭೀತರಾಗಿದ್ದಾರೆ. ಇನ್ನು ಒಂಟಿ ಸಲಗ ಗ್ರಾಮದೊಳಗೆ ಹಾದು ಕಾಫಿತೋಟದತ್ತ ಹೋಗಿದೆ.
ಹಾಸನ, ಫೆಬ್ರವರಿ 19: ಹಾಸನ (Hassan) ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದೆ. ಬೇಲೂರು (Beluru) ತಾಲೂಕಿನ ಕಣಗುಪ್ಪೆ ಗ್ರಾಮದೊಳಗೆ ಬೆಳ್ಳಂಬೆಳಿಗ್ಗೆ ಒಂಟಿ ಸಲಗವೊಂದು (Elephant) ಬಂದಿದೆ. ಕಾಡಾನೆ ಕಂಡು ಗ್ರಾಮಸ್ಥರು ಭಯ ಭೀತರಾಗಿದ್ದಾರೆ. ಇನ್ನು ಒಂಟಿ ಸಲಗ ಗ್ರಾಮದೊಳಗೆ ಹಾದು ಕಾಫಿತೋಟದತ್ತ ಹೋಗಿದೆ. ಕಾಡಾನೆ ಗ್ರಾಮದೊಳಗೆ ನಡೆದು ಹೋಗುವ ವಿಡಿಯೋ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಇತ್ತೀಚಿಗೆ ಬೇಲೂರು ತಾಲೂಕಿನಲ್ಲೂ ಕಾಡಾನೆಗಳ ಹಾವಳಿ ಮಿತಿಮೀರಿದೆ. ರಸ್ತೆಯಲ್ಲಿ ಓಡಾಡಲು ಸಾರ್ವಜನಿಕರು ಭಯಪಡುತ್ತಿದ್ದಾರೆ. ಸ್ಥಳೀಯರು ಹೊಲ, ಗದ್ದೆ, ಕಾಫಿ ತೋಟಗಳಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಆದರು ಕೂಡ ಯಾವುದೇ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದು, ಕೂಡಲೇ ಕಾಡಾನೆಯನ್ನು ಕಾಡಿಗಟ್ಟುವಂತೆ ಆಗ್ರಹಿಸಿದ್ದಾರೆ.
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
