AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ ನಗರಕ್ಕೇ ನುಗ್ಗಿ ಒಂಟಿ ಸಲಗದ ದಾಂಧಲೆ: ಎದುರಿಗೆ ಸಿಕ್ಕಿದ್ದೆಲ್ಲ ಉಡೀಸ್​​!

ಚನ್ನಪಟ್ಟಣ ನಗರಕ್ಕೇ ನುಗ್ಗಿ ಒಂಟಿ ಸಲಗದ ದಾಂಧಲೆ: ಎದುರಿಗೆ ಸಿಕ್ಕಿದ್ದೆಲ್ಲ ಉಡೀಸ್​​!

ಪ್ರಶಾಂತ್​ ಬಿ.
| Edited By: |

Updated on: Apr 27, 2026 | 3:11 PM

Share

ಇಷ್ಟು ದಿನಗಳ ಕಾಲ ಗ್ರಾಮೀಣ ಭಾಗದಲ್ಲಿ ದಾಂಧಲೆ ನಡೆಸುತ್ತಿದ್ದ ಕಾಡಾನೆಗಳು ಇದೀಗ ನಗರ ಪ್ರದೇಶಕ್ಕೇ ನುಗ್ಗತೊಡಗಿವೆ. ಚನ್ನಪಟ್ಟಣದ ಹೌಸಿಂಗ್ ಬೋರ್ಡ್ ಬಳಿಯೇ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕಾಪೌಂಡ್​​ಗಳನ್ನು ಹಾರಿ ಎಲ್ಲೆಂದರಲ್ಲಿ ಓಡಾಡುತ್ತಿರುವ ಕಾಡಾನೆ ಹಲವೆಡೆ ವಾಹನಗಳನ್ನ ಡ್ಯಾಮೇಜ್ ಮಾಡಿದೆ. ಬಳ್ಳಾರಿ ಮೂಲದ ರಾಮಪ್ಪ ಎಂಬುವವರ ಗುಡಿಸಲನ್ನು ಒಂಟಿ ಸಲಗ ಧ್ವಂಸಗೊಳಿಸಿದ್ದು, ಗುಡಿಸಲಿನಲ್ಲಿದ್ದ ರಾಮಪ್ಪಗೆ ಗಾಯಗಳಾಗಿವೆ.

ಬೆಂಗಳೂರು, ಏಪ್ರಿಲ್​​ 27: ಚನ್ನಪಟ್ಟಣದಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು, ಇದೀಗ ನಗರದ ಹೌಸಿಂಗ್ ಬೋರ್ಡ್ ಬಳಿಯೇ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿದೆ. ಕಾಡಾನೆ ಓಡಾಟ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಆತಂಕ ಹೆಚ್ಚಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕಾಪೌಂಡ್​​ಗಳನ್ನು ಹಾರಿ ಎಲ್ಲೆಂದರಲ್ಲಿ ಓಡಾಡುತ್ತಿರುವ ಕಾಡಾನೆ ಹಲವೆಡೆ ವಾಹನಗಳನ್ನ ಡ್ಯಾಮೇಜ್ ಮಾಡಿದೆ. ನಗರ ಪ್ರದೇಶಕ್ಕೆ ಆನೆ ಎಂಟ್ರಿ ಹಿನ್ನೆಲೆ ಅರಣ್ಯ ಇಲಾಖೆಯಿಂದ ಅಲರ್ಟ್ ಘೋಷಿಸಲಾಗಿದ್ದು, ಯಾರು ಕೂಡ ಮನೆಯಿಂದ ಹೊರಬಾರದಂತೆ ಸೂಚನೆ ನೀಡಲಾಗಿದೆ. ಬಳ್ಳಾರಿ ಮೂಲದ ರಾಮಪ್ಪ ಎಂಬುವವರ ಗುಡಿಸಲನ್ನು ಒಂಟಿ ಸಲಗ ಧ್ವಂಸಗೊಳಿಸಿದ್ದು, ಗುಡಿಸಲಿನಲ್ಲಿದ್ದ ರಾಮಪ್ಪಗೆ ಗಾಯಗಳಾಗಿವೆಯಾದರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಡಾನೆ ಕಂಡು ಆಘಾತದಿಂದ ಮನೆ ಮುಂದೆ ಗೀತಾ ಎಂಬವರು ಕುಸಿದುಬಿದ್ದಿದ್ದು, ಚನ್ನಪಟ್ಟಣ ತಾಲೂಕು ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More