ಬೆಚ್ಚಿಬಿದ್ದ ಸ್ಥಳೀಯರು: ಅಬ್ಬಬ್ಬಾ ಒಂದೆರಡಲ್ಲ… ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15ಕ್ಕೂ ಹೆಚ್ಚು ಆನೆಗಳು!
ಮೂಡಿಗೆರೆ ತಾಲೂಕಿನ ಗೋಣಿಬೀಡು ವ್ಯಾಪ್ತಿಯಲ್ಲಿ 15ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದೆ. ಬೇಲೂರು ಮಾರ್ಗವಾಗಿ ಬಂದ ಆನೆಗಳು ಕಸ್ಕೆಬೈಲು, ಚಟ್ಟನಹಳ್ಳಿ ಭಾಗದಲ್ಲಿ ಸಂಚರಿಸುತ್ತಿದ್ದು, ರಸ್ತೆ ದಾಟುವ ವಿಡಿಯೋ ವೈರಲ್ ಆಗಿದೆ. ಮೂಡಿಗೆರೆ ಅರಣ್ಯ ವಲಯ ವ್ಯಾಪ್ತಿಯಲ್ಲಿ ಕಾಡಾನೆಗಳು ಬೀಡುಬಿಟ್ಟಿದ್ದು, ಇದರಿಂದ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ.
ಚಿಕ್ಕಮಗಳೂರು, ಮಾರ್ಚ್ 26: ಜಿಲ್ಲೆಯ ಹಲವೆಡೆ ಮತ್ತೆ ಕಾಡಾನೆಗಳ ಸಂಚಾರ ಜನರ ಆತಂಕಕ್ಕೆ ಕಾರಣವಾಗಿದ್ದು, ಮೂಡಿಗೆರೆ ತಾಲೂಕಿನ ಗೋಣಿಬೀಡು ವ್ಯಾಪ್ತಿಯಲ್ಲಿ 45ಕ್ಕೂ ಹೆಚ್ಚು ಕಾಡಾನೆಗಳು ಬೀಡುಬಿಟ್ಟಿವೆ. ಬೇಲೂರು ಮಾರ್ಗವಾಗಿ ಬಂದಿರುವ 15ಕ್ಕೂ ಹೆಚ್ಚು ಕಾಡಾನೆಗಳು ಕಸ್ಕೆಬೈಲು, ಚಟ್ಟನಹಳ್ಳಿ, ಹುಲಿಹಂಡ್ಲು ಸೇರಿದಂತೆ ಹಲವೆಡೆ ಸಂಚಾರ ನಡೆಸುತ್ತಿದ್ದು, ಕಾಡಾನೆಗಳ ಹಿಂಡು ರಸ್ತೆ ದಾಟುತ್ತಿರುವ ವಿಡಿಯೋ ಸಾರ್ವಜನಿಕರ ಮೊಬೈಲ್ನಲ್ಲಿ ಸೆರೆಯಾಗಿದೆ. ಮೂಡಿಗೆರೆ ಅರಣ್ಯ ವಲಯ ವ್ಯಾಪ್ತಿಯಲ್ಲಿ ಕಾಡಾನೆಗಳ ಸಂಚಾರ ಕಂಡುಬಂದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Mar 26, 2026 09:53 AM
Loading...
Unable to load recommendations.
Follow Us