ಆನೇಕಲ್ ದೊಡ್ಡಕೆರೆಯಲ್ಲಿ ಬೀಡುಬಿಟ್ಟ ಗಜಪಡೆ: ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಯ್ತು ಕಾಡಾನೆಗಳ ದೃಶ್ಯ!
ಆನೇಕಲ್ ಪಟ್ಟಣದ ದೊಡ್ಡಕೆರೆಯಲ್ಲಿ ಆಹಾರ ಅರಸಿ ಬಂದ ಕಾಡಾನೆಗಳ ಹಿಂಡು ಬೀಡುಬಿಟ್ಟಿದೆ. ರೈತರ ಜಮೀನುಗಳಿಗೆ ಲಗ್ಗೆ ಇಟ್ಟಿದ್ದ ಗಜಪಡೆಯ ದೃಶ್ಯಗಳು ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳನ್ನು ಕಾಡಿಗಟ್ಟಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸದ್ಯ, ಸ್ಥಳೀಯರು ಕಾಡಾನೆಗಳ ಭಯದಿಂದ ಹೊರಗಡೆ ಓಡಾಡುವುದೇ ಕಷ್ಟಕರವಾಗಿ ಪರಿಣಮಿಸಿದೆ.
ಆನೇಕಲ್, ಏಪ್ರಿಲ್ 7: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿರುವ ಕಾಡಾನೆಗಳ ಹಿಂಡು ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ದೊಡ್ಡಕೆರೆಯಲ್ಲಿ ಬೀಡುಬಿಟ್ಟಿದೆ. ಕಳೆದ ಎರಡು ದಿನಗಳಿಂದ ರೈತರ ಜಮೀನುಗಳಿಗೆ ಲಗ್ಗೆ ಇಡುತ್ತಿದ್ದ ಆನೆಗಳು, ಬೆಳಗಾಗುತ್ತಿದ್ದಂತೆ ಕೆರೆ ಅಂಗಳಕ್ಕೆ ಬಂದು ನಿಂತಿವೆ. ಪ್ರಾಣಿ ಪ್ರಿಯ ಪ್ರದೀಪ್ ಅವರ ಡ್ರೋನ್ ಕ್ಯಾಮರಾದಲ್ಲಿ ಈ ದೃಶ್ಯಗಳು ಅದ್ಭುತವಾಗಿ ಸೆರೆಯಾಗಿವೆ. ಸಾವಿರಾರು ಜನರು ಆನೆಗಳನ್ನು ನೋಡಲು ಮುಗಿಬಿದ್ದಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳನ್ನು ಕಾಡಿಗಟ್ಟಲು ಹರಸಾಹಸ ಪಡುತ್ತಿದ್ದಾರೆ.
Follow Us
Latest Videos
