AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲ ಬೇಗೆಗೆ ಕಾಡಾನೆಯ ಮಣ್ಣಿನ ಮಜ್ಜನ! ಸಫಾರಿಗೆ ಹೋದವರಿಗೆ ಕಂಡ ಮನಮೋಹಕ ದೃಶ್ಯ ಇಲ್ಲಿದೆ ನೋಡಿ

ಬಿಸಿಲ ಬೇಗೆಗೆ ಕಾಡಾನೆಯ ಮಣ್ಣಿನ ಮಜ್ಜನ! ಸಫಾರಿಗೆ ಹೋದವರಿಗೆ ಕಂಡ ಮನಮೋಹಕ ದೃಶ್ಯ ಇಲ್ಲಿದೆ ನೋಡಿ

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Apr 20, 2026 | 11:44 AM

Share

ನಗರದ ಕೆ.ಗುಡಿಯ ಅರಣ್ಯ ಪ್ರದೇಶದಲ್ಲಿ ಬಿಸಿಲಿನ ತೀವ್ರತೆಯಿಂದ ತಪ್ಪಿಸಿಕೊಳ್ಳಲು ಕಾಡಾನೆ ಮಣ್ಣಿನಲ್ಲಿ ಮಜ್ಜನ ಮಾಡಿಕೊಳ್ಳುತ್ತಿರುವ ಮನಮೋಹಕ ದೃಶ್ಯ ಗಮನ ಸೆಳೆದಿದೆ. ಜಂಗಲ್ ಲಾಡ್ಜ್ ಸಫಾರಿಗೆ ತೆರಳಿದ್ದ ಪ್ರವಾಸಿಗರು ಈ ಅಪರೂಪದ ಕ್ಷಣವನ್ನು ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ತಾಪಮಾನ ಏರಿಕೆಯಿಂದ ದೇಹದ ಉಷ್ಣತೆಯನ್ನು ನಿಯಂತ್ರಿಸಿಕೊಳ್ಳಲು ಮತ್ತು ಚರ್ಮವನ್ನು ರಕ್ಷಿಸಿಕೊಳ್ಳಲು ಆನೆಗಳು ಮಣ್ಣು ಅಥವಾ ಕೆಸರಿನಲ್ಲಿ ಮಜ್ಜನ ಮಾಡುವುದು ಸಾಮಾನ್ಯ. ಇಲ್ಲಿ ಗಜರಾಜನು ಮಣ್ಣಿನಲ್ಲೇ ಮಿಂದೆದ್ದಿರುವುದು ಪ್ರವಾಸಿಗರನ್ನು ಪುಳಕಿತರನ್ನಾಗಿಸಿದೆ.

ಚಾಮರಾಜನಗರ, ಏಪ್ರಿಲ್ 20: ನಗರದ ಕೆ.ಗುಡಿಯ ಅರಣ್ಯ ಪ್ರದೇಶದಲ್ಲಿ ಬಿಸಿಲಿನ ತೀವ್ರತೆಯಿಂದ ತಪ್ಪಿಸಿಕೊಳ್ಳಲು ಕಾಡಾನೆ ಮಣ್ಣಿನಲ್ಲಿ ಮಜ್ಜನ ಮಾಡಿಕೊಳ್ಳುತ್ತಿರುವ ಮನಮೋಹಕ ದೃಶ್ಯ ಗಮನ ಸೆಳೆದಿದೆ. ಜಂಗಲ್ ಲಾಡ್ಜ್ ಸಫಾರಿಗೆ ತೆರಳಿದ್ದ ಪ್ರವಾಸಿಗರು ಈ ಅಪರೂಪದ ಕ್ಷಣವನ್ನು ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ತಾಪಮಾನ ಏರಿಕೆಯಿಂದ ದೇಹದ ಉಷ್ಣತೆಯನ್ನು ನಿಯಂತ್ರಿಸಿಕೊಳ್ಳಲು ಮತ್ತು ಚರ್ಮವನ್ನು ರಕ್ಷಿಸಿಕೊಳ್ಳಲು ಆನೆಗಳು ಮಣ್ಣು ಅಥವಾ ಕೆಸರಿನಲ್ಲಿ ಮಜ್ಜನ ಮಾಡುವುದು ಸಾಮಾನ್ಯ. ಇಲ್ಲಿ ಗಜರಾಜನು ಮಣ್ಣಿನಲ್ಲೇ ಮಿಂದೆದ್ದಿರುವುದು ಪ್ರವಾಸಿಗರನ್ನು ಪುಳಕಿತರನ್ನಾಗಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More