ಆನೇಕಲ್: ಚೂಡೇನಹಳ್ಳಿ ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್‌ನ ಚೂಡೇನಹಳ್ಳಿಯಲ್ಲಿ ಕಾಡಾನೆಗಳ ಹಿಂಡು ಕಳೆದೊಂದು ವಾರದಿಂದ ಬೀಡುಬಿಟ್ಟಿದ್ದು, ರೈತರ ಬೆಳೆಗಳನ್ನು ನಾಶಪಡಿಸುತ್ತಿವೆ. ರಾತ್ರಿ ವೇಳೆ ಗ್ರಾಮಕ್ಕೆ ನುಗ್ಗಿ ಸಂಚರಿಸುತ್ತಿರುವ ಆನೆಗಳಿಂದ ಜನರಲ್ಲಿ ಜೀವ ಭಯ ಶುರುವಾಗಿದ್ದು, ಅರಣ್ಯ ಇಲಾಖೆಯ ಕ್ರಮಕ್ಕಾಗಿ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸದ್ಯ, ಗ್ರಾಮಕ್ಕೆ ನುಗ್ಗಿ ನೈಟ್ ರೌಂಡ್ಸ್ ಮಾಡುತ್ತಿದ್ದ ಕಾಡಾನೆಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಓಡಿಸಿದ್ದಾರೆ.
ಆನೇಕಲ್, ಏಪ್ರಿಲ್ 3: ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಚೂಡೇನಹಳ್ಳಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದೆ. ಕಳೆದ ಒಂದು ವಾರದಿಂದ ಗ್ರಾಮದ ಸುತ್ತಮುತ್ತಲೇ ಬೀಡುಬಿಟ್ಟಿರುವ ಗಜಪಡೆ, ಪ್ರತಿ ರಾತ್ರಿ ಜಮೀನುಗಳಿಗೆ ನುಗ್ಗಿ ಬೆಳೆ ನಾಶಪಡಿಸುತ್ತಿವೆ. ರೈತರು ಕಷ್ಟಪಟ್ಟು ಬೆಳೆದ ಬೆಳೆ ಆನೆಗಳ ಪಾಲಾಗುತ್ತಿದ್ದು, ಜೀವ ಭಯದಲ್ಲಿರುವ ಗ್ರಾಮಸ್ಥರು ಮನೆಯಿಂದ ಹೊರಬರಲು ನಡುಗುವಂತಾಗಿದೆ. ಕೂಡಲೇ ಅರಣ್ಯ ಇಲಾಖೆ ಮಧ್ಯಪ್ರವೇಶಿಸಿ ಆನೆಗಳನ್ನು ಕಾಡಿಗಟ್ಟಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ಮಧ್ಯೆ, ಗ್ರಾಮದಲ್ಲಿ ಆನೆಗಳ ನೈಟ್ ರೌಂಡ್ಸ್ ವಿಡಿಯೋ ವೈರಲ್ ಆಗುತ್ತಿದೆ.
Follow Us
Latest Videos
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

