ಎಸ್ಟೇಟ್​​​ನಲ್ಲಿ ಬೀಡುಬಿಟ್ಟ ಕಾಡಾನೆಗಳ ಹಿಂಡು: ಗಜಪಡೆ ಕಂಡು ಸಾರ್ವಜನಿಕರು ಕಂಗಾಲು

Edited By:

Updated on: May 29, 2026 | 2:50 PM

ಚಿಕ್ಕಮಗಳೂರು ಜಿಲ್ಲೆಯ ಕಡವಂತಿ ಸುತ್ತಮುತ್ತಲ ಗ್ರಾಮಗಳಲ್ಲಿ ಗಜಪಡೆ ಪ್ರತ್ಯಕ್ಷವಾಗುತ್ತಿರುವ ಹಿನ್ನೆಲೆ ಸಾರ್ವಜನಿಕರು ಆತಂಕಗೊಂಡಿದ್ದಾರೆ. ಈ ನಡುವೆ ಕಡವಂತಿಯ ವಡ್ಡಿಗುಡ್ಡ ಎಸ್ಟೇಟ್​ನಲ್ಲಿ ಆನೆಗಳ ಹಿಂಡು ಕಾಣಿಸಿಕೊಂಡಿರೋದು ಜನರ ಭೀತಿ ಹೆಚ್ಚಿಸಿದೆ. ಹೀಗಾಗಿ ಕಾಡಾನೆಗಳ ಹಾವಳಿ ತಡೆಗಟ್ಟುವಂತೆ ಸ್ಥಳೀಯ ನಿವಾಸಿಗಳು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಚಿಕ್ಕಮಗಳೂರು, ಮೇ 29: ಜಿಲ್ಲೆಯಲ್ಲಿ ಕಾಡಾನೆ ಉಪಟಳ ಮುಂದುವರಿದಿದ್ದು, ಕಡವಂತಿಯ ವಡ್ಡಿಗುಡ್ಡ ಎಸ್ಟೇಟ್​ನಲ್ಲಿ ಗಜಪಡೆ ಪ್ರತ್ಯಕ್ಷವಾಗಿದೆ. ಕಡವಂತಿ, ಬಿಳಗೊಳ, ಹ್ಯಾರಂಬಿಪುರ, ಪುರ, ಮಲ್ಲಿಗೆಖಾನ್, ಬೇರಣಗೋಡು ಸುತ್ತಮುತ್ತವೇ ಕಾಡಾನೆಗಳು ಸಂಚಾರ ಮಾಡುತ್ತಿದ್ದು, ಇವುಗಳ ಹಾವಳಿ ತಡೆಗಟ್ಟುವಂತೆ ಸ್ಥಳೀಯ ನಿವಾಸಿಗಳು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಬಾಳೆಹೊನ್ನೂರು ವಲಯ ಅರಣ್ಯ ವ್ಯಾಪ್ತಿಯಲ್ಲಿ ಆನೆಗಳು ಜನವಸತಿ ಪ್ರದೇಶಗಳ ಸಮೀಪವೇ ಪ್ರತ್ಯಕ್ಷವಾಗ್ತಿರೋದು ಸಾರ್ವಜನಿಕರ ಆತಂಕ ಹೆಚ್ಚಿಸಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: May 29, 2026 02:49 PM
Follow Us
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More