ಭದ್ರಾ ಹಿನ್ನೀರಿನಲ್ಲಿ ಕಾಡಾನೆಗಳ ಜಲಕ್ರೀಡೆ: ವಿಡಿಯೋ ಇಲ್ಲಿದೆ
ರೈತರೊಬ್ಬರು ಕಾಡಾನೆ ದಾಳಿಗೆ ಬಲಿಯಾದ ಎರಡು ದಿನಗಳ ನಂತರ ಇದೀಗ ಚಿಕ್ಕಮಗಳೂರಿನ ಎನ್ಆರ್ ಪುರ ಬಳಿ ಭದ್ರಾ ಹಿನ್ನೀರಿನಲ್ಲಿ ಕಾಡಾನೆಗಳು ಜಲಕ್ರೀಡೆ ಆಡುತ್ತಿರುವುದು ಕಂಡುಬಂದಿದೆ. ವಿಡಿಯೋ ಇಲ್ಲಿದೆ.
ಚಿಕ್ಕಮಗಳೂರು, ಡಿಸೆಂಬರ್ 2: ಎನ್ಆರ್ ಪುರ ನಗರದಿಂದ ನಾಲ್ಕು ಕಿಲೋಮೀಟರ್ ದೂರದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳ ಹಿಂಡಿನಲ್ಲಿರುವ ಮೂರು ಕಾಡಾನೆಗಳು ಭದ್ರಾ ಹಿನ್ನೀರಿನಲ್ಲಿ ಕಾಡಾನೆಗಳು ಜಲಕ್ರೀಡೆ ಆಡುತ್ತಿರುವ ದೃಶ್ಯ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ. ಇದೀಗ ಭದ್ರಾ ಹಿನ್ನೀರು ಪ್ರದೇಶ ದಾಟಿ ಕಾಡಾನೆಗಳ ಹಿಂಡು ನಗರಕ್ಕೆ ಬರುವ ಅತಂಕ ಎದುರಾಗಿದೆ. ಎರಡು ದಿನಗಳ ಹಿಂದಷ್ಟೇ ಈ ಪ್ರದೇಶದಲ್ಲಿ ರೈತರೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿದ್ದರು. ಕಾಡಾನೆಗಳು ಕಾಣಿಸಿಕೊಂಡಿರುವ ಕಾರಣ ಜನ ಓಡಾಡಲು ಭಯ ಪಡುತ್ತಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ