ರಾಣಾ, ಪ್ರಿಯಾಂಕಾ ನಟನೆಯ ‘ಏಳು ಮಲೆ’ ಸಿನಿಮಾ ತಂಡದ ಗಣೇಶ ಹಬ್ಬ ಸಂಭ್ರಮ

Updated on: Aug 27, 2025 | 7:15 PM

ನಟಿ ರಕ್ಷಿತಾ ಪ್ರೇಮ್ ಅವರ ಸಹೋದರ ರಾಣಾ ‘ಏಳು ಮಲೆ’ ಸಿನಿಮಾದಲ್ಲಿ ನಟಿಸಿದ್ದಾರೆ. ರಾಣಾ ಅವರಿಗೆ ಪ್ರಿಯಾಂಕಾ ಜೋಡಿ ಆಗಿದ್ದಾರೆ. ತರುಣ್ ಸುಧೀರ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಪುನೀತ್ ರಂಗಸ್ವಾಮಿ ಅವರು ‘ಏಳುಮಲೆ’ ಸಿನಿಮಾಗೆ ಆಕ್ಷನ್-ಕಟ್ ಹೇಳಿದ್ದಾರೆ. ಚಿತ್ರತಂಡದವರು ಒಟ್ಟಿಗೆ ಸೇರಿ ಗಣೇಶ ಹಬ್ಬವನ್ನು ಆಚರಿಸಿದ್ದಾರೆ.

ನಟಿ ರಕ್ಷಿತಾ ಪ್ರೇಮ್ ಅವರ ಸಹೋದರ ರಾಣಾ ‘ಏಳು ಮಲೆ’ (Elu Male) ಸಿನಿಮಾದಲ್ಲಿ ನಟಿಸಿದ್ದಾರೆ. ರಾಣಾ ಅವರಿಗೆ ಪ್ರಿಯಾಂಕಾ ಜೋಡಿ ಆಗಿದ್ದಾರೆ. ತರುಣ್ ಸುಧೀರ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಪುನೀತ್ ರಂಗಸ್ವಾಮಿ ಅವರು ಈ ‘ಏಳುಮಲೆ’ ಸಿನಿಮಾಗೆ ಆಕ್ಷನ್-ಕಟ್ ಹೇಳಿದ್ದಾರೆ. ಚಿತ್ರತಂಡದವರು ಒಟ್ಟಿಗೆ ಸೇರಿ ಗಣೇಶ ಹಬ್ಬ (Ganesh Chaturthi 2025) ಆಚರಿಸಿದ್ದಾರೆ. ಪ್ರಿಯಾಂಕಾ, ಸೋನಾಲ್ ಮೊಂತೆರೋ ಸೇರಿದಂತೆ ಹಲವರು ಈ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More