ವಿದ್ಯಾರ್ಥಿನಿಯರಿಂದ ರಕ್ಷಿತಾಗೆ ಕಣ್ಣೀರಿನ ವಿದಾಯ: ಅಕ್ಷರಶಃ ಭಾವುಕ ಕ್ಷಣಕ್ಕೆ ಸಾಕ್ಷಿಯಾಯ್ತು ಸರ್ಕಾರಿ ಕಾಲೇಜ್

ಸ್ನೇಹಿತೆಯನ್ನು ಕಳೆದುಕೊಂಡ ದುಃಖದಲ್ಲಿ ಸ್ನೇಹಿತೆಯರು ಬಿಕ್ಕಳಿಸಿ ಬಿಕ್ಕಳಿಸಿ ಅಂತ್ತರು. ರಕ್ಷಿತಾಳ ಮೃತದೇಹ ನೋಡಿ ಶಿಕ್ಷಕರು ಮತ್ತು ಸಾರ್ವಜನಿಕರು ಕಣ್ಣೀರಿಟ್ಟರು.

TV9kannada Web Team

| Edited By: ಗಂಗಾಧರ್​ ಬ. ಸಾಬೋಜಿ

Sep 22, 2022 | 9:10 PM

ಚಿಕ್ಕಮಗಳೂರು: ಜಿಲ್ಲೆಯ ಬಸವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜು ಇಂದು ಅಕ್ಷರಶಃ ಭಾವುಕ ಕ್ಷಣಕ್ಕೆ ಸಾಕ್ಷಿಯಾಗಿತ್ತು. ಅಂಗಾಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ವಿದ್ಯಾರ್ಥಿನಿ ರಕ್ಷಿತಾಗೆ ಸಾವಿರಾರು ವಿದ್ಯಾರ್ಥಿನಿಯರಿಂದ ಕಣ್ಣೀರಿನ ವಿದಾಯ ನೀಡಲಾಯಿತು. ಸ್ನೇಹಿತೆಯನ್ನು ಕಳೆದುಕೊಂಡ ದುಃಖದಲ್ಲಿ ಸ್ನೇಹಿತೆಯರು ಬಿಕ್ಕಳಿಸಿ ಬಿಕ್ಕಳಿಸಿ ಅಂತ್ತರು. ರಕ್ಷಿತಾಳ ಮೃತದೇಹ ನೋಡಿ ಶಿಕ್ಷಕರು ಮತ್ತು ಸಾರ್ವಜನಿಕರು ಕಣ್ಣೀರಿಟ್ಟರು. ಇನ್ನು ತಂಗಿಗಾಗಿ ಅಣ್ಣ ಒಂದು ಮುತ್ತಿನ ಕಥೆಯ ಹೇಳಿತು ಈ ಗೊಂಬೆ ಎಂದು ಹಾಡಿದ್ದು, ಕಲ್ಲು ಹೃದಯವು ಕರಗುವಂತಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow us on

Click on your DTH Provider to Add TV9 Kannada