ಬೆಂಗಳೂರಿನಲ್ಲಿ ಮತ್ತೆ ಗರ್ಜಿಸಿದ ಜೆಸಿಬಿ: ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ

Updated on: Jan 08, 2026 | 4:00 PM

ಬೆಂಗಳೂರಿನಲ್ಲಿ ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ಮುಂದುವರೆದಿದೆ. ಇತ್ತೀಚೆಗಷ್ಟೇ ಯಲಹಂಕದ ಕೋಗಿಲು ಬಳಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮನೆಗಳನ್ನು ತೆರವು ಮಾಡಲಾಗಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಸರ್ಕಾರ ಅರ್ಹರಿಗೆ ಪರ್ಯಾಯ ಮನೆ ನೀಡಲು ಮುಂದಾಗಿದೆ. ಇದೀಗ ನಾಗವಾರ ಬಳಿಯ ಥಣಿಸಂದ್ರದ ಅಶ್ವತ್ಥ್​​ ನಗರದಲ್ಲಿ ಅಕ್ರಮ ಮನೆಗಳ ತೆರವು ಕಾರ್ಯ ನಡೆದಿದೆ. ಸುಮಾರು 60 ಮನೆಗಳನ್ನು ತೆರವು ಮಾಡಿರುವ ಬಗ್ಗೆ ಬಿಡಿಎ ಮಾಹಿತಿ ನೀಡಿದೆ.

ಬೆಂಗಳೂರು, (ಜನವರಿ 08): ಬೆಂಗಳೂರಿನಲ್ಲಿ ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ಮುಂದುವರೆದಿದೆ. ಇತ್ತೀಚೆಗಷ್ಟೇ ಯಲಹಂಕದ ಕೋಗಿಲು ಬಳಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮನೆಗಳನ್ನು ತೆರವು ಮಾಡಲಾಗಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಸರ್ಕಾರ ಅರ್ಹರಿಗೆ ಪರ್ಯಾಯ ಮನೆ ನೀಡಲು ಮುಂದಾಗಿದೆ. ಇದೀಗ ನಾಗವಾರ ಬಳಿಯ ಥಣಿಸಂದ್ರದ ಅಶ್ವತ್ಥ್​​ ನಗರದಲ್ಲಿ ಅಕ್ರಮ ಮನೆಗಳ ತೆರವು ಕಾರ್ಯ ನಡೆದಿದೆ. ಸುಮಾರು 60 ಮನೆಗಳನ್ನು ತೆರವು ಮಾಡಿರುವ ಬಗ್ಗೆ ಬಿಡಿಎ ಮಾಹಿತಿ ನೀಡಿದೆ. ಆದ್ರೆ, ಯಾವುದೇ ಮಾಹಿತಿ ಅಥವಾ ನೋಟಿಸ್ ನೀಡದೆ ಮನೆಗಳ ತೆರವು ಮಾಡಲಾಗುತ್ತಿದೆ ಎಂದು ಬಿಡಿಎ ಅಧಿಕಾರಿಗಳ ವಿರುದ್ಧ ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More