ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿ; ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನಗಳ ತಪಾಸಣೆ

ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿ; ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನಗಳ ತಪಾಸಣೆ

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 17, 2024 | 4:01 PM

ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು, ಚುನಾವಣಾ ಅಕ್ರಮ ನಡೆಯದಂತೆ ಪೊಲೀಸರ ಹದ್ದಿನ ಕಣ್ಗಾವಲು ಇರಿಸಿದ್ದಾರೆ. ಈ ಹಿನ್ನೆಲೆ ಬೆಂಗಳೂರು-ಮೈಸೂರು ಹೆದ್ದಾರಿಯ ಹೆಜ್ಜಾಲ ಬಳಿಯ ಕಣಮಿಣಕೆ ಟೋಲ್ ಬಳಿ ಬ್ಯಾರಿಕೇಡ್ ಅಳವಡಿಸಿ ಬಿಡದಿ ಪೊಲೀಸರು ವಾಹನಗಳ ತಪಾಸಣೆ ಮಾಡುತ್ತಿದ್ದಾರೆ.

ರಾಮನಗರ, ಮಾ.17: ಲೋಕಸಭೆ ಚುನಾವಣೆ ನೀತಿ ಸಂಹಿತೆ(Code of Conduct) ಜಾರಿ ಹಿನ್ನೆಲೆ ಬೆಂಗಳೂರು-ಮೈಸೂರು ಹೆದ್ದಾರಿಯ ಹೆಜ್ಜಾಲ ಬಳಿಯ ಕಣಮಿಣಕೆ ಟೋಲ್ ಬಳಿ ಬ್ಯಾರಿಕೇಡ್ ಅಳವಡಿಸಿ ಬಿಡದಿ ಪೊಲೀಸರು ವಾಹನಗಳ ತಪಾಸಣೆ ಮಾಡುತ್ತಿದ್ದಾರೆ. ವಾಹನಗಳನ್ನು ತಡೆದು ನಿಲ್ಲಿಸಿ ಓರಲ್ ಚೆಕಿಂಗ್, ವಾಹನದ ಡಿಕ್ಕಿ ತೆಗೆಸಿ ತಪಾಸಣೆ ಮಾಡಲಾಗುತ್ತಿದೆ. ಈ ಮೂಲಕ ಚುನಾವಣಾ ಅಕ್ರಮ ನಡೆಯದಂತೆ ಪೊಲೀಸರ ಹದ್ದಿನ ಕಣ್ಗಾವಲು ಇರಿಸಿದ್ದಾರೆ. ಇನ್ನು ಬೆಳಿಗ್ಗೆ ಭೇಟಿ ನೀಡಬೇಕಿದ್ದ ಕಂದಾಯ ಅಧಿಕಾರಿಗಳು ಇಲ್ಲದಿದ್ದರೂ, ಕಂದಾಯ ಅಧಿಕಾರಿಗಳ ಗೈರಿನಲ್ಲಿಯೇ ಚೆಕಿಂಗ್ ಮಾಡಲಾಗುತ್ತಿದೆ. ಜೊತೆಗೆ ಬೆಂಗಳೂರು-ಮೈಸೂರು ಹೆದ್ದಾರಿಯ ಅತಿದೊಡ್ಡ ಚೇಕಿಂಗ್ ಪಾಯಿಂಟ್ ಇದಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ