ಕೊನೆಗೂ ಯುರೋಪಿಯನ್ ತಂಡದ ವಿರುದ್ಧ ಗೆದ್ದ ಇಂಗ್ಲೆಂಡ್
England vs Scotland: ಸ್ಕಾಟ್ಲೆಂಡ್ ತಂಡಕ್ಕೆ ಸೋಲುಣಿಸುವ ಮೂಲಕ ಇಂಗ್ಲೆಂಡ್ ತಂಡವು ಇದೇ ಮೊದಲ ಬಾರಿಗೆ ಯುರೋಪಿಯನ್ ತಂಡದ ವಿರುದ್ಧ ಟಿ20 ವಿಶ್ವಕಪ್ನಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಯುರೋಪಿಯನ್ ತಂಡಗಳ ವಿರುದ್ಧದ ಸೋಲಿನ ಸರಪಳಿಯನ್ನು ಕಳಚಿಕೊಂಡಿದೆ. ಇನ್ನು ಈ ಜಯದೊಂದಿಗೆ ಇಂಗ್ಲೆಂಡ್ ತಂಡವು ಸೂಪರ್-8 ಹಂತಕ್ಕೇರುವ ಆಸೆಯನ್ನು ಜೀವಂತವರಿಸಿಕೊಂಡಿದೆ.
T20 World Cup 2026: ಟಿ20 ವಿಶ್ವಕಪ್ನಲ್ಲಿ ಇದೇ ಮೊದಲ ಬಾರಿಗೆ ಇಂಗ್ಲೆಂಡ್ ತಂಡ ಯುರೋಪಿಯನ್ ತಂಡದ ವಿರುದ್ಧ ಗೆಲುವು ದಾಖಲಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ ತಂಡವು 19.4 ಓವರ್ಗಳಲ್ಲಿ 152 ರನ್ಗಳಿಸಿ ಆಲೌಟ್ ಆಗಿತ್ತು.
153 ರನ್ಗಳ ಗುರಿ ಪಡೆದ ಇಂಗ್ಲೆಂಡ್ ತಂಡವು 18.2 ಓವರ್ಗಳಲ್ಲಿ 155 ರನ್ ಬಾರಿಸಿ 5 ವಿಕೆಟ್ಗಳ ಜಯ ಸಾಧಿಸಿದೆ. ಈ ಮೂಲಕ ಇಂಗ್ಲೆಂಡ್ ತಂಡವು ಯುರೋಪಿಯನ್ ತಂಡಗಳ ವಿರುದ್ಧದ ತನ್ನ ಸೋಲಿನ ಸರಪಳಿಯನ್ನು ಕಳಚಿಕೊಂಡಿದೆ.
ಟಿ20 ವಿಶ್ವಕಪ್ನಲ್ಲಿ ಇಂಗ್ಲೆಂಡ್ ತಂಡವು ಒಮ್ಮೆಯೂ ಯುರೋಪಿಯನ್ ತಂಡಗಳ ವಿರುದ್ಧ ಗೆಲುವು ದಾಖಲಿಸಿರಲಿಲ್ಲ. ಈ ಹಿಂದಿನ ಪಂದ್ಯಗಳ ಫಲಿತಾಂಶ ಹೀಗಿತ್ತು…
- 2009ರ ಟಿ20 ವಿಶ್ವಕಪ್: ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ತಂಡವು 4 ವಿಕೆಟ್ಗಳ ಸೋಲನುಭವಿಸಿತ್ತು.
- 2010ರ ಟಿ20 ವಿಶ್ವಕಪ್: ಐರ್ಲೆಂಡ್ ವಿರುದ್ಧದ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು.
- 2014ರ ಟಿ20 ವಿಶ್ವಕಪ್: ನೆದರ್ಲೆಂಡ್ಸ್ ವಿರುದ್ಧ ಇಂಗ್ಲೆಂಡ್ 45 ರನ್ಗಳಿಂದ ಪರಾಜಯಗೊಂಡಿತ್ತು.
- 2022ರ ಟಿ20 ವಿಶ್ವಕಪ್: ಐರ್ಲೆಂಡ್ ವಿರುದ್ಧ ಇಂಗ್ಲೆಂಡ್ 5 ರನ್ಗಳಿಂದ ಸೋಲನುಭವಿಸಿತ್ತು.
- 2024ರ ಟಿ20 ವಿಶ್ವಕಪ್: ಸ್ಕಾಟ್ಲೆಂಡ್ ವಿರುದ್ಧದ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು.
ಇದೀಗ ಸ್ಕಾಟ್ಲೆಂಡ್ ತಂಡಕ್ಕೆ ಸೋಲುಣಿಸುವ ಮೂಲಕ ಇಂಗ್ಲೆಂಡ್ ತಂಡವು ಇದೇ ಮೊದಲ ಬಾರಿಗೆ ಯುರೋಪಿಯನ್ ತಂಡದ ವಿರುದ್ಧ ಟಿ20 ವಿಶ್ವಕಪ್ನಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಯುರೋಪಿಯನ್ ತಂಡಗಳ ವಿರುದ್ಧದ ಸೋಲಿನ ಸರಪಳಿಯನ್ನು ಕಳಚಿಕೊಂಡಿದೆ.
Published on: Feb 15, 2026 11:12 AM
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ

