IND vs ENG 2nd Test: ಎರಡನೇ ಟೆಸ್ಟ್​ಗೆ ಇಂಗ್ಲೆಂಡ್ ಕೀಪರ್​ನಿಂದ ವಿಶಿಷ್ಟ ಅಭ್ಯಾಸ: ಹೇಗೆ ನೋಡಿ

|

Updated on: Feb 01, 2024 | 11:28 AM

India vs England Second Test: ಭಾರತ ಹಾಗೂ ಇಂಗ್ಲೆಂಡ್ ನಡುವಣ ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಆಂಗ್ಲರ ವಿಕೆಟ್‌ಕೀಪರ್ ಬೆನ್ ಫೋಕ್ಸ್. ಇವರು 'ವಿಶೇಷ ಕಸರತ್ತು' ಮಾಡುತ್ತಿರುವುದು ಕಂಡುಬಂದಿದೆ. ಈ ಕುರಿತ ವಿಡಿಯೋವನ್ನು ಇಂಗ್ಲೆಂಡ್ ಕ್ರಿಕೆಟ್ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಅವರ ಅಭ್ಯಾಸ ಹೇಗಿದೆ ನೋಡಿ.

ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಣ ಎರಡನೇ ಟೆಸ್ಟ್ ಪಂದ್ಯ ಆರಂಭಕ್ಕೆ ಒಂದು ದಿನವಷ್ಟೆ ಬಾಕಿಯಿದೆ. ಪಿಚ್ ಹೇಗೆ ವರ್ತಿಸುತ್ತದೆ ಎಂದು ಅರಿಯದ ಉಭಯ ತಂಡಗಳು ವಿಶಾಖಪಟ್ಟಣಂನ ಡಾ. ವೈಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಇದರಲ್ಲಿ ಎಲ್ಲರ ಗಮನ ಸೆಳೆದಿದ್ದು ಇಂಗ್ಲೆಂಡ್‌ನ ವಿಕೆಟ್‌ಕೀಪರ್ ಬೆನ್ ಫೋಕ್ಸ್. ಇವರು ‘ವಿಶೇಷ ಕಸರತ್ತು’ ಮಾಡುತ್ತಿರುವುದು ಕಂಡುಬಂದಿದೆ. ಈ ಕುರಿತ ವಿಡಿಯೋ ಇಂಗ್ಲೆಂಡ್ ಕ್ರಿಕೆಟ್ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಸರ್ರೆ ಪರ ಆಡುವ ವಿಕೆಟ್‌ಕೀಪರ್ ಹೈದರಾಬಾದ್‌ನಲ್ಲಿ ಸ್ಪಿನ್ನಿಂಗ್ ವಿಕೆಟ್‌ನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಇನ್ನಷ್ಟು ಅನುಭವ ಹೆಚ್ಚಿಸಲು ಮುಖ್ಯವಾಗಿ ವೈಜಾಗ್‌ನಲ್ಲಿ ಕಡಿಮೆ ಬೌನ್ಸ್ ಇರುವ ವಿಕೆಟ್‌ಗೆ ತಯಾರಾಗಲು ಕಠಿಣ ಅಭ್ಯಾಸ ಮಾಡುತ್ತಿರುವುದು ಕಂಡುಬಂದಿದೆ. ಇಲ್ಲಿ ಕಡಿಮೆ ಮತ್ತು ಹೆಚ್ಚಿನ ಬೌನ್ಸ್‌ಗಳಿಗೆ ತಯಾರಿ ನಡೆಸುತ್ತಿದ್ದಾರೆ. ಎರಡನೇ ಟೆಸ್ಟ್‌ ನಡೆಯಲಿರುವ ವಿಶಾಖಪಟ್ಟಣಂನ ಪಿಚ್ ಕೂಡ ನಿಗೂಢವಾಗಿದೆ. ಈ ಪಿಚ್‌ನಲ್ಲಿ ಬ್ಯಾಟ್ಸ್‌ಮನ್ ಅಥವಾ ಬೌಲರ್ ಯಾರು ಸಹಾಯ ಪಡೆಯುತ್ತಾರೆ ಎಂಬುದನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ