Ashes 2025: 14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!

Updated on: Dec 27, 2025 | 11:54 AM

Australia vs England, 4th Test: ಈ ಹದಿನಾಲ್ಕು ವರ್ಷಗಳಲ್ಲಿ ಇಂಗ್ಲೆಂಡ್ ತಂಡವು ಆಸ್ಟ್ರೇಲಿಯಾದಲ್ಲಿ 18 ಟೆಸ್ಟ್ ಪಂದ್ಯಗಳನ್ನಾಡಿದೆ. ಈ ವೇಳೆ ಇಂಗ್ಲೆಂಡ್ 16 ಮ್ಯಾಚ್​ಗಳಲ್ಲಿ ಸೋಲನುಭವಿಸಿದರೆ, 2 ಪಂದ್ಯಗಳನ್ನು ಆಸ್ಟ್ರೇಲಿಯಾ ಡ್ರಾ ಮಾಡಿಕೊಂಡಿತ್ತು. ಅಂದರೆ ಕಳೆದ ಒಂದು ದಶಕದಿಂದ ಇಂಗ್ಲೆಂಡ್ ವಿರುದ್ಧ ಆಸೀಸ್ ಪಡೆ ತವರಿನಲ್ಲಿ ಒಂದೇ ಒಂದು ಪಂದ್ಯದಲ್ಲಿ ಸೋತಿರಲಿಲ್ಲ.

ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯ ಗೆಲ್ಲುವ ಇಂಗ್ಲೆಂಡ್ ತಂಡದ 14 ವರ್ಷಗಳ ಕನಸು ಕೊನೆಗೂ ಈಡೇರಿದೆ. ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ಆ್ಯಶಸ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ ಭರ್ಜರಿ ಜಯ ಸಾಧಿಸಿದೆ. ಇದಕ್ಕೂ ಮುನ್ನ ಇಂಗ್ಲೆಂಡ್ ತಂಡ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯ ಗೆದ್ದಿದ್ದು 2011 ರಲ್ಲಿ.

2011 ರಲ್ಲಿ ನಡೆದ ಆ್ಯಶಸ್ ಸರಣಿಯ  ಐದನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಆಸ್ಟ್ರೇಲಿಯಾವನ್ನು ಇನ್ನಿಂಗ್ಸ್ ಮತ್ತು 83 ರನ್‌ಗಳಿಂದ ಸೋಲಿಸಿತ್ತು. ಈ ಅಮೋಘ ಗೆಲುವಿನ ನಂತರ ಆಂಗ್ಲ ಪಡೆ ಒಮ್ಮೆಯೂ ಕಾಂಗರೂನಾಡಿನಲ್ಲಿ ಟೆಸ್ಟ್ ಪಂದ್ಯ ಗೆದ್ದಿರಲಿಲ್ಲ ಎಂಬುದೇ ಅಚ್ಚರಿ.

ಈ ಹದಿನಾಲ್ಕು ವರ್ಷಗಳಲ್ಲಿ ಇಂಗ್ಲೆಂಡ್ ತಂಡವು ಆಸ್ಟ್ರೇಲಿಯಾದಲ್ಲಿ 18 ಟೆಸ್ಟ್ ಪಂದ್ಯಗಳನ್ನಾಡಿದೆ. ಈ ವೇಳೆ ಇಂಗ್ಲೆಂಡ್ 16 ಮ್ಯಾಚ್​ಗಳಲ್ಲಿ ಸೋಲನುಭವಿಸಿದರೆ, 2 ಪಂದ್ಯಗಳನ್ನು ಆಸ್ಟ್ರೇಲಿಯಾ ಡ್ರಾ ಮಾಡಿಕೊಂಡಿತ್ತು. ಅಂದರೆ ಕಳೆದ ಒಂದು ದಶಕದಿಂದ ಇಂಗ್ಲೆಂಡ್ ವಿರುದ್ಧ ಆಸೀಸ್ ಪಡೆ ತವರಿನಲ್ಲಿ ಒಂದೇ ಒಂದು ಪಂದ್ಯದಲ್ಲಿ ಸೋತಿರಲಿಲ್ಲ.

ಇದೀಗ ಆಸ್ಟ್ರೇಲಿಯಾ ತಂಡದ ಈ ಗೆಲುವಿನ ನಾಗಲೋಟಕ್ಕೆ ಇಂಗ್ಲೆಂಡ್ ತಂಡ ಬ್ರೇಕ್ ಹಾಕಿದೆ. ಮೆಲ್ಬೋರ್ನ್​ ಮೈದಾನದಲ್ಲಿ ಆತಿಥೇಯರನ್ನು 4 ವಿಕೆಟ್​ಗಳಿಂದ ಸೋಲಿಸಿ ಇಂಗ್ಲೆಂಡ್ ತಂಡವು ಆಸ್ಟ್ರೇಲಿಯಾ ಪಿಚ್​ನಲ್ಲಿ 14 ವರ್ಷಗಳ ಬಳಿಕ ಗೆಲುವಿನ ನಗೆ ಬೀರಿದೆ.

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಟ್ರಾವಿಸ್ ಹೆಡ್, ಜೇಕ್ ವೆದರಾಲ್ಡ್, ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್ (ನಾಯಕ), ಉಸ್ಮಾನ್ ಖ್ವಾಜಾ, ಕ್ಯಾಮರೋನ್ ಗ್ರೀನ್, ಅಲೆಕ್ಸ್ ಕ್ಯಾರಿ, ಮಿಚೆಲ್ ಸ್ಟಾರ್ಕ್, ಸ್ಕಾಟ್ ಬೋಲ್ಯಾಂಡ್, ಮೈಕೆಲ್ ನೇಸರ್, ಜ್ಯೇ ರಿಚರ್ಡ್ಸನ್.

ಇಂಗ್ಲೆಂಡ್ ಪ್ಲೇಯಿಂಗ್ 11: ಝಾಕ್ ಕ್ರಾಲಿ, ಬೆನ್ ಡಕೆಟ್, ಜೇಕಬ್ ಬೆಥೆಲ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮಿ ಸ್ಮಿತ್, ವಿಲ್ ಜ್ಯಾಕ್ಸ್, ಬ್ರೈಡನ್ ಕಾರ್ಸ್​, ಗಸ್ ಅಟ್ಕಿನ್ಸನ್, ಜೋಶ್ ಟಂಗ್.