ಶತಕದ ಖಾತೆ ತೆರೆದ ಜೇಕಬ್ ಬೆಥೆಲ್
Australia vs England, 5th Test: ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಪ್ರಥಮ ಇನಿಂಗ್ಸ್ನಲ್ಲಿ 384 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಆಸ್ಟ್ರೇಲಿಯಾ ತಂಡವು 567 ರನ್ ಕಲೆಹಾಕಿದ್ದರು. 183 ರನ್ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಇಂಗ್ಲೆಂಡ್ ತಂಡವು 53 ಓವರ್ಗಳ ಮುಕ್ತಾಯದ ವೇಳೆಗೆ 5 ವಿಕೆಟ್ ಕಳೆದುಕೊಂಡು 221 ರನ್ ಕಲೆಹಾಕಿದೆ.
ಇಂಗ್ಲೆಂಡ್ ತಂಡದ ಯಂಗ್ ಸೆನ್ಸೇಷನ್ ಜೇಕಬ್ ಬೆಥೆಲ್ ಟೆಸ್ಟ್ ಕ್ರಿಕೆಟ್ನಲ್ಲಿ ಚೊಚ್ಚಲ ಶತಕ ಸಿಡಿಸಿದ್ದಾರೆ. ಅದು ಸಹ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಎಂಬುದು ವಿಶೇಷ. ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆಯುತ್ತಿರುವ ಆ್ಯಶಸ್ ಸರಣಿಯ 5ನೇ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬೆಥೆಲ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು.
ಈ ಬ್ಯಾಟಿಂಗ್ನೊಂದಿಗೆ ಬೆಥೆಲ್ 162 ಎಸೆತಗಳಲ್ಲಿ ಶತಕ ಪೂರೈಸಿದರು. ಇದು ಜೇಕಬ್ ಬೆಥೆಲ್ ಅವರ ಮೊದಲ ಟೆಸ್ಟ್ ಸೆಂಚುರಿ ಎಂಬುದು ವಿಶೇಷ. ಈ ಶತಕದೊಂದಿಗೆ ಆಸ್ಟ್ರೇಲಿಯಾದಲ್ಲಿ ಸೆಂಚುರಿ ಸಿಡಿಸಿದ ಹದಿ ಹರೆಯದ ಬ್ಯಾಟರ್ಗಳ ಪಟ್ಟಿಯಲ್ಲೂ ಬೆಥೆಲ್ ಹೆಸರು ಸೇರ್ಪಡೆಯಾಗಿದೆ.
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಪ್ರಥಮ ಇನಿಂಗ್ಸ್ನಲ್ಲಿ 384 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಆಸ್ಟ್ರೇಲಿಯಾ ತಂಡವು 567 ರನ್ ಕಲೆಹಾಕಿದ್ದರು. 183 ರನ್ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಇಂಗ್ಲೆಂಡ್ ತಂಡವು 53 ಓವರ್ಗಳ ಮುಕ್ತಾಯದ ವೇಳೆಗೆ 5 ವಿಕೆಟ್ ಕಳೆದುಕೊಂಡು 221 ರನ್ ಕಲೆಹಾಕಿದೆ.

