ಲಾಲ್​ಬಾಗ್ ಮಾದರಿಯಲ್ಲಿ ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ

Edited By:

Updated on: Sep 21, 2026 | 7:10 PM

ಬೆಂಗಳೂರಿನ ಕಬ್ಬನ್ ಪಾರ್ಕ್‌ಗೆ ಪ್ರವೇಶ ಶುಲ್ಕ ವಿಧಿಸುವ ಬಗ್ಗೆ ತೋಟಗಾರಿಕೆ ಇಲಾಖೆ ಚಿಂತನೆ ನಡೆಸಿದೆ. ಲಾಲ್ ಬಾಗ್ ಮಾದರಿಯಲ್ಲಿ ಪಾರ್ಕ್ ನಿರ್ವಹಣೆ, ಹೆಚ್ಚುತ್ತಿರುವ ಜನಸಂಖ್ಯೆ, ಭದ್ರತೆ ಮತ್ತು ಸ್ವಚ್ಛತಾ ವೆಚ್ಚಗಳನ್ನು ನಿಭಾಯಿಸಲು ಈ ನಿರ್ಧಾರ ಪರಿಗಣಿಸಲಾಗಿದೆ. ಆದರೆ, ಈ ಪ್ರಸ್ತಾಪಕ್ಕೆ ಬಡ ಮತ್ತು ಮಧ್ಯಮ ವರ್ಗದ ಜನರ ಕಡೆಯಿಂದ ವಿರೋಧ ವ್ಯಕ್ತವಾಗುತ್ತಿದೆ.

ಬೆಂಗಳೂರು, ಸೆಪ್ಟೆಂಬರ್​​ 21: ಲಾಲ್​​ ಬಾಗ್ ಮಾದರಿಯಲ್ಲಿ ಕಬ್ಬನ್ ಪಾರ್ಕ್‌ಗೆ ಪ್ರವೇಶ ಶುಲ್ಕ ವಿಧಿಸುವ ಕುರಿತು ತೋಟಗಾರಿಕೆ ಇಲಾಖೆ ಗಂಭೀರ ಚಿಂತನೆ ನಡೆಸಿದೆ. ಕಬ್ಬನ್ ಪಾರ್ಕ್ ಬೆಂಗಳೂರಿನ ಪ್ರಮುಖ ಉದ್ಯಾನವನಗಳಲ್ಲಿ ಒಂದು. ನಿತ್ಯ ಜನರ ದಂಡು ಹೆಚ್ಚುತ್ತಿದ್ದು, ವಾರಾಂತ್ಯದಲ್ಲಿ ಕಾಲಿಡಲು ಜಾಗವಿಲ್ಲದಷ್ಟು ಜನಜಂಗುಳಿ ಉಂಟಾಗುತ್ತಿದೆ. 300 ಎಕರೆ ವಿಶಾಲವಾದ ಪಾರ್ಕ್​ನ ಸ್ವಚ್ಛತೆ, ಭದ್ರತೆ ಮತ್ತು ನಿರ್ವಹಣಾ ವೆಚ್ಚ ದುಪ್ಪಟ್ಟು ಹಿನ್ನೆಲೆ ತೋಟಗಾರಿಕಾ ಇಲಾಖೆಗೆ ಆರ್ಥಿಕ ಹೊರೆ ಹೆಚ್ಚಾಗಿದೆ. ಹೀಗಾಗಿ ಪ್ರವೇಶ ಶುಲ್ಕ್​ ನಿಗದಿ ಮಾಡಿದರೆ ನಿರ್ವಹಣೆ ಸುಲಭ, ಇಲಾಖೆಗೆ ಆದಾಯವೂ ಬರುತ್ತೆ ಎಂಬ ಲೆಕ್ಕಾಚಾರ ಇದೆ. ಸದ್ಯ ಈ ಬಗ್ಗೆ ತೋಟಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳ ಮಟ್ಟದಲ್ಲಿ ಗಂಭೀರ ಚರ್ಚೆ ನಡೆದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More