ಪ್ರಧಾನಿಗಳ ಆಗಮನದ ಹಿನ್ನೆಲೆ ಮೈಸೂರು ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮರಗಳನ್ನು ಕಡಿದಿರುವುದಕ್ಕೆ ಪರಿಸರ ಪ್ರೇಮಿಗಳ ಆಕ್ರೋಷ

ಪ್ರಧಾನಿಗಳ ಆಗಮನದ ಹಿನ್ನೆಲೆ ಮೈಸೂರು ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮರಗಳನ್ನು ಕಡಿದಿರುವುದಕ್ಕೆ ಪರಿಸರ ಪ್ರೇಮಿಗಳ ಆಕ್ರೋಷ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jun 17, 2022 | 6:27 PM

ಆದರೆ ರಸ್ತೆ ಮತ್ತು ಇಕ್ಕೆಲಗಳನ್ನು ಅಂದಗೊಳಿಸುವ ಭರದಲ್ಲಿ ಮರಗಳನ್ನು ಕತ್ತರಿಸಿರುವುದು ಪರಿಸರ ಪ್ರೇಮಿಗಳ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಪರಿಸರ ಇಲಾಖೆ ಅಧಿಕಾರಿಗಳು ಮರ ಕಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಅವರು ಅಗ್ರಹಿಸುತ್ತಿದ್ದಾರೆ.

Mysuru:  ಜೂನ್ 21 ಮತ್ತು 22 ರಂದು ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಮೈಸೂರಿಗೆ ಆಗಮಿಸುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಅಂತರರಾಷ್ಟ್ರೀಯ ಯೋಗ ದಿಣಾಚರಣೆ ಅಂಗವಾಗಿ ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ (Mandakalli Airport) ಬಂದಿಳಿಯುವ ಪ್ರಧಾನಿಗಳು ಅಲ್ಲಿಂದ ಕಾರಿನಲ್ಲಿ ನಗರದೊಳಗೆ ಬರುವುದರಿಂದ ವಿಮಾನ ನಿಲ್ದಾಣ ರಸ್ತೆ ಸೌಂದರ್ಯೀಕರಣಕ್ಕೆ ಒಳಗಾಗುತ್ತಿದೆ. ಆದರೆ ರಸ್ತೆ ಮತ್ತು ಇಕ್ಕೆಲಗಳನ್ನು ಅಂದಗೊಳಿಸುವ ಭರದಲ್ಲಿ ಮರಗಳನ್ನು ಕತ್ತರಿಸಿರುವುದು ಪರಿಸರ ಪ್ರೇಮಿಗಳ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಪರಿಸರ ಇಲಾಖೆ ಅಧಿಕಾರಿಗಳು ಮರ ಕಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಅವರು ಅಗ್ರಹಿಸುತ್ತಿದ್ದಾರೆ. ಸಾಲು ಸಾಲು ಮರಗಳನ್ನು ಕಡಿದಿರುವುದನ್ನು ವಿಡಿಯೋನಲ್ಲಿ ನೋಡಬಹುದು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ                       ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.