AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗ್ರಾಮ ಪಂಚಾಯತಿಗಳಿಗೆ ಪಿಡಿಒಗಳ ನೇಮಕಾತಿ; ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ

Video: ಗ್ರಾಮ ಪಂಚಾಯತಿಗಳಿಗೆ ಪಿಡಿಒಗಳ ನೇಮಕಾತಿ; ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ

ಅಕ್ಷತಾ ವರ್ಕಾಡಿ
|

Updated on: Aug 01, 2026 | 4:37 PM

Share

ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ಭರ್ತಿ ಕುರಿತು ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದಾರೆ. 150ಕ್ಕೂ ಹೆಚ್ಚು ಪಿಡಿಒಗಳಿಗೆ ಶೀಘ್ರ ನೇಮಕಾತಿ ಆದೇಶ ನೀಡಲಾಗುವುದು. ಗ್ರಾಮೀಣ ಭಾಗದ ಜನರಿಗೆ ಮೂಲಸೌಕರ್ಯ ಕಲ್ಪಿಸುವುದು ಮತ್ತು ಸಮಗ್ರ ಅಭಿವೃದ್ಧಿಗೆ ಪಿಡಿಒಗಳು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು ಎಂದು ಅವರು ಕರೆ ನೀಡಿದರು.

ಬೆಂಗಳೂರು: ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 1036 ಪಿಡಿಒ ಹುದ್ದೆಗಳು ಖಾಲಿ ಇವೆ. ಕಲ್ಯಾಣ ಕರ್ನಾಟಕ ಭಾಗದ 80 ಅಧಿಕಾರಿಗಳಿಗೆ ಈಗಾಗಲೇ ಮುಂಬಡ್ತಿ ನೀಡಿ ಸ್ಥಳ ನಿಯುಕ್ತಿ ಮಾಡಲಾಗಿದೆ. ಇನ್ನು 76 ಜನರಿಗೆ ನೇಮಕಾತಿ ಆದೇಶ ನೀಡಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸುಮಾರು 150 ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ 2-3 ತಿಂಗಳ ಒಳಗಾಗಿ ನೇಮಕಾತಿ ಆದೇಶ ನೀಡಲಾಗುವುದು. ಸಿಂಧುತ್ವ ಪರಿಶೀಲನೆ, ಆರೋಗ್ಯ ತಪಾಸಣೆ ಸೇರಿ ಅಗತ್ಯ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಈ ಆದೇಶಗಳನ್ನು ನೀಡಲಾಗುತ್ತದೆ. ಈ ನೇಮಕಾತಿಗಳ ನಂತರವೂ 200-250 ಹುದ್ದೆಗಳು ಖಾಲಿ ಉಳಿಯಲಿವೆ. ಒಟ್ಟಾರೆ, ಸುಮಾರು ಶೇ. 90 ರಷ್ಟು ಪಿಡಿಒ ಹುದ್ದೆಗಳು ಭರ್ತಿಯಾಗಲಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Follow Us