ನಿರ್ಧಾರ ಬದಲಿಸದ ಈಶ್ವರಪ್ಪ ನಾಮಪತ್ರ ಸಲ್ಲಿಸುವ ಮೊದಲು ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು

|

Updated on: Apr 12, 2024 | 12:26 PM

ಹಾವೇರಿ ಲೋಕಸಭಾ ಕ್ಷೇತ್ರದಿಂದ ತಮ್ಮ ಮಗ ಕಾಂತೇಶ್ ಗೆ ಟಿಕೆಟ್ ನೀಡದಿರುವ ಕಾರಣ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಬಂಡಾಯವೆದ್ದಿರುವ ಈಶ್ವರಪ್ಪ ಖುದ್ದು ತಾವೇ ಶಿವಮೊಗ್ಗ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಬಿಜೆಪಿಯ ಬಿವೈ ರಾಘವೇಂದ್ರ ಮತ್ತು ಕಾಂಗ್ರೆಸ್ ನ ಗೀತಾ ಶಿವರಾಜಕುಮಾರ್ ಈಶ್ವರಪ್ಪನವರ ಎದುರಾಳಿಯಾಗಿದ್ದಾರೆ.   

ಶಿವಮೊಗ್ಗ: ಬಿಜೆಪಿಯ ಹಿರಿಯ ನಾಯಕರ್ಯಾರೂ ಕೆಎಸ್ ಈಶ್ವರಪ್ಪ (KS Eshwarappa) ಅವರನ್ನು ಸಂಪರ್ಕಿಸಿದಂತೆ ಕಾಣಿತ್ತಿಲ್ಲ. ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ (Shivamogga LS seat) ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರ ಅಚಲವಾಗಿದ್ದು ಇಂದು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸುವ ಮೊದಲು ಕುಟುಂಬ ಸಮೇತರಾಗಿ ದೇವಸ್ಥಾನಗಳಿಗೆ ಭೇಟಿ ದೇವರಿಗೆ ಪೂಜೆ ಸಲ್ಲಿಸಿದರು. ಶಿವಮೊಗ್ಗ ನಗರದ ಪ್ರಸಿದ್ಧ ಕೋಟೆ ಆಂಜನೇಯ ದೇವಸ್ಥಾನದಲ್ಲಿ (Kote Anjaneya temple) ಅವರು ಪೂಜೆಸಲ್ಲಿಸಿ ರಾಮಜಪ ಮಾಡುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಶಿವಮೊಗ್ಗದಲ್ಲಿ ಅವರು ಸ್ವಂತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮೂಲಕಾರಣರಾಗಿರುವ ಅವರ ಪುತ್ರ ಕಾಂತೇಶ್ ಸಹ ಜೊತೆಗಿದ್ದರು. ಮಂಗಳಾರತಿ ಸಮಯದಲ್ಲಿ ಎಲ್ಲರೂ ಶ್ರೀರಾಮ ಜಯರಾಮಮ ಜಯಜಯರಾಮ ಜಪಗೀತೆಯನ್ನು ಹಾಡಿದರು. ಕೋಟೆ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಈಶ್ವರಪ್ಪ ಕುಟುಂಬ ನಗರದಲ್ಲಿರುವ ಕೋಟೆ ಮಾರಿಕಾಂಬ ದೇವಸ್ಥಾನಕ್ಕೂ ತೆರಳಿ ವಿಶೇಷ ಪೂಜೆ ಸಲ್ಲಿಸಿತು. ಹಾವೇರಿ ಲೋಕಸಭಾ ಕ್ಷೇತ್ರದಿಂದ ತಮ್ಮ ಮಗ ಕಾಂತೇಶ್ ಗೆ ಟಿಕೆಟ್ ನೀಡದಿರುವ ಕಾರಣ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಬಂಡಾಯವೆದ್ದಿರುವ ಈಶ್ವರಪ್ಪ ಖುದ್ದು ತಾವೇ ಶಿವಮೊಗ್ಗ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಬಿಜೆಪಿಯ ಬಿವೈ ರಾಘವೇಂದ್ರ ಮತ್ತು ಕಾಂಗ್ರೆಸ್ ನ ಗೀತಾ ಶಿವರಾಜಕುಮಾರ್ ಈಶ್ವರಪ್ಪನವರ ಎದುರಾಳಿಯಾಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ವಿಜಯೇಂದ್ರ ಮಾತಿನ ಧೋರಣೆ ಬದಲಿಸಿದ್ದರೆ ಬೇರೆ ರೀತಿಯಲ್ಲಿ ಉತ್ತರ ಕೊಡಬೇಕಾಗುತ್ತದೆ: ಕೆಎಸ್ ಈಶ್ವರಪ್ಪ

Follow us on