ಎಥೆನಾಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಹಾವೇರಿ ಜಿಲ್ಲೆ ರಾಣೇಬೆನ್ನೂರು ನಗರದ ಹೊರವಲಯದಲ್ಲಿರೋ ಹಲಗೇರಿ ಬಳಿ ಎಥೆನಾಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದೆ. ಅಪಘಾತ ನಡೆದ ಕ್ಷಣಾರ್ಧದಲ್ಲೆ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾರಿ ಅನಾಹುತ ತಪ್ಪಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.
ಹಾವೇರಿ, ಮಾರ್ಚ್ 05: ಎಥೆನಾಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ, ಕ್ಷಣಾರ್ಧದಲ್ಲಿ ಹೊತ್ತಿ ಉರಿದಿರುವ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ನಗರದ ಹೊರವಲಯದಲ್ಲಿರೋ ಹಲಗೇರಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ಟ್ಯಾಂಕರ್ ಉರುಳಿ ಬಿದ್ದಿದ್ದು, ಭಾರಿ ಅನಾಹುತ ತಪ್ಪಿದೆ. ಹುಬ್ಬಳ್ಳಿಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ರಾಣೇಬೆನ್ನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us