28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್: ಸಚಿವ ರಾಮಲಿಂಗಾರೆಡ್ಡಿ ಎದುರೇ ಶಾಸಕರಾದ ಶಿವಲಿಂಗೇಗೌಡ – ಹೆಚ್.ಕೆ. ಸುರೇಶ್ ಜಟಾಪಟಿ

ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದ ಎತ್ತಿನಹೊಳೆ ಯೋಜನೆ ಪರಿಶೀಲನಾ ಸಭೆಯಲ್ಲಿ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಹಾಗೂ ಬಿಜೆಪಿ ಶಾಸಕ ಎಚ್.ಕೆ. ಸುರೇಶ್ ನಡುವೆ ತೀವ್ರ ವಾಗ್ವಾದ ನಡೆಯಿತು. ರೈತರಿಗೆ 28 ಕೋಟಿ ರೂ. ಪರಿಹಾರ ಹಣ ಬಿಡುಗಡೆ ವಿಚಾರದಲ್ಲಿ ಯಾರು ಶ್ರಮಿಸಿದ್ದಾರೆ ಎಂಬ ಬಗ್ಗೆ ಮಾತಿನ ಚಕಮಕಿ ನಡೆಯಿತು.

ಹಾಸನ, ಜು.2: ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ ಗಂಗೂರು ಗ್ರಾಮದಲ್ಲಿ ನಿನ್ನೆ ಸಂಜೆ ಎತ್ತಿನಹೊಳೆ ಯೋಜನೆ ಕಾಮಗಾರಿ ಪರಿಶೀಲನೆ ವೇಳೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರ ಸಮ್ಮುಖದಲ್ಲೇ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಹಾಗೂ ಬಿಜೆಪಿ ಶಾಸಕ ಎಚ್.ಕೆ. ಸುರೇಶ್ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಯೋಜನೆಗೆ ಭೂಮಿ ನೀಡಿದ ರೈತರಿಗೆ 28 ಕೋಟಿ ರೂ. ಪರಿಹಾರ ಹಣ ಬಿಡುಗಡೆ ಮಾಡುವ ವಿಚಾರದಲ್ಲಿ ಈ ವಾಗ್ವಾದ ಪ್ರಾರಂಭವಾಯಿತು. ರೈತರು ತಮ್ಮ ಪರಿಹಾರಕ್ಕಾಗಿ ಸಚಿವರಿಗೆ ಮನವಿ ಸಲ್ಲಿಸುತ್ತಿದ್ದ ವೇಳೆ, “ನಾನೇ 28 ಕೋಟಿ ಹಣ ಬಿಡುಗಡೆ ಮಾಡಿಸಿದ್ದೇನೆ” ಎಂದು ಶಾಸಕ ಶಿವಲಿಂಗೇಗೌಡರು ಹೇಳಿಕೊಂಡರು. ಇದರಿಂದ ಕೆರಳಿದ ಶಾಸಕ ಸುರೇಶ್, ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು. 28 ಕೋಟಿ ರೂ. ಪರಿಹಾರ ಹಣ ಸಿದ್ಧವಿದ್ದು, 10 ದಿನಗಳಲ್ಲಿ ಜಿಲ್ಲಾಧಿಕಾರಿಗಳ ಮೂಲಕ 69/103 ಜನರಿಗೆ ಪರಿಹಾರ ನೀಡಿ ಕಾಮಗಾರಿ ಶುರು ಮಾಡುವ ಬಗ್ಗೆ ಭರವಸೆ ನೀಡಲಾಗಿದೆ. ನ್ಯಾಯಾಲಯದ ನಿರ್ದೇಶನಗಳ ಪ್ರಕಾರ ಪರಿಹಾರ ಪಾವತಿ ಪ್ರಕ್ರಿಯೆ ನಡೆಯಲಿದೆ. ಪರಿಹಾರ ನೀಡದೆ ಕಾಮಗಾರಿ ಮುಂದುವರಿಸಲು ಬಿಡುವುದಿಲ್ಲ ಎಂದು ರೈತರಿಗೆ ಭರವಸೆ ನೀಡಲಾಗಿದ್ದರೂ, ಶಾಸಕರ ನಡುವಿನ ವಾಗ್ವಾದ ಸಭೆಯ ವಾತಾವರಣವನ್ನು ಬಿಸಿ ಮಾಡಿತ್ತು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Loading...
Unable to load recommendations.
Follow Us