AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆದೇ ಕಾರ್ಯಕ್ರಮ ಮಾಡ್ಬೇಕು: ಕಾಯ್ದೆ ಬಗ್ಗೆ ಸಿಎಂ ಸ್ಪಷ್ಟನೆ

ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆದೇ ಕಾರ್ಯಕ್ರಮ ಮಾಡ್ಬೇಕು: ಕಾಯ್ದೆ ಬಗ್ಗೆ ಸಿಎಂ ಸ್ಪಷ್ಟನೆ

ಗಂಗಾಧರ​ ಬ. ಸಾಬೋಜಿ
|

Updated on:Aug 13, 2026 | 10:44 PM

Share

ಸಾರ್ವಜನಿಕ ಸ್ಥಳಗಳ ಪ್ರವೇಶ ನಿಯಂತ್ರಣ ವಿಧೇಯಕ ಕುರಿತು ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ರಸ್ತೆಗಳಲ್ಲಿ ಅಥವಾ ಸಾರ್ವಜನಿಕ ಪ್ರದೇಶಗಳಲ್ಲಿ ಯಾವುದೇ ಕಾರ್ಯಕ್ರಮ ನಡೆಸಲು ಅನುಮತಿ ಕಡ್ಡಾಯ. ಪಕ್ಷ ಭೇದವಿಲ್ಲದೆ ಎಲ್ಲರೂ ಇದನ್ನು ಪಾಲಿಸಬೇಕು. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಾರ್ಯಕ್ರಮಗಳಿಗೆ ಪೂರ್ವಾನುಮತಿ ಮತ್ತು ದಾಖಲಾತಿ ಅಗತ್ಯ. ಸಾರ್ವಜನಿಕ ಸುವ್ಯವಸ್ಥೆ ಮತ್ತು ಲೆಕ್ಕಾಚಾರಕ್ಕಾಗಿ ಈ ನಿಯಮ ಜಾರಿಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು, ಆಗಸ್ಟ್​​ 13: ‘ಯಾವುದೇ ರಸ್ತೆಯಲ್ಲಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬೇಕಾದರೆ ಕಡ್ಡಾಯವಾಗಿ ಪೂರ್ವಾನುಮತಿ ಮತ್ತು ಸೂಕ್ತ ದಾಖಲೆಗಳನ್ನು ಹೊಂದಿರಬೇಕು’ ಎಂದು ಸಿಎಂ ಡಿಕೆ ಶಿವಕುಮಾರ್​ ಹೇಳಿದ್ದಾರೆ. ಸಾರ್ವಜನಿಕ ಪ್ರದೇಶ, ಪ್ರವೇಶ ನಿಯಂತ್ರಣ ವಿಧೇಯಕ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಯಾರೇ ಆಗಲಿ ಅನುಮತಿ ತೆಗೆದುಕೊಂಡು ಕಾರ್ಯಕ್ರಮ ಮಾಡಬೇಕು. ಬೆಂಗಳೂರು ಅಥವಾ ಎಲ್ಲೇ ಆಗಲಿ, ಎಲ್ಲಾದರೂ ಕಾರ್ಯಕ್ರಮ ಮಾಡಬೇಕಾದರೆ ಅನುಮತಿ ತೆಗೆದುಕೊಳ್ಳಬೇಕು. ವಿಧಾನಸೌಧದಲ್ಲೂ ಕೃಷ್ಣಬೈರೇಗೌಡರು ಕಾರ್ಯಕ್ರಮ ಮಾಡುತ್ತಿದ್ದಾರೆ, ಅವರೂ ಪರ್ಮಿಷನ್ ತೆಗೆದುಕೊಂಡೇ ಮಾಡುತ್ತಿದ್ದಾರೆ ಅಲ್ವಾ, ಹಾಗೆಯೇ ಎಲ್ಲರೂ ಅನುಮತಿ ತೆಗೆದುಕೊಳ್ಳಬೇಕು’ ಎಂದು ಹೇಳಿದ್ದಾರೆ.

ವರದಿ: ಈರಣ್ಣ ಬಸವ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Aug 13, 2026 10:43 PM

Follow Us