ನಮ್ಮ ಸರ್ಕಾರ ರಚನೆಯಾದ ದಿನದಿಂದಲೇ ಅದನ್ನು ಉರುಳಿಸುವ ಪ್ರಯತ್ನಗಳು ನಡೆದಿವೆ: ಸತೀಶ್ ಜಾರಕಿಹೊಳಿ

ಅರುಣ್​ ಕುಮಾರ್​ ಬೆಳ್ಳಿ

Updated on: Apr 16, 2025 | 7:23 PM

ಜಾರಿ ನಿರ್ದೇಶನಾಲಯವು ಸೋನಿಯ ಗಾಂಧಿ ಮತ್ತು ರಾಹುಲ್ ಗಾಂಧಿಯವರ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಿರುವ ಬಗ್ಗೆ ಕೇಳಿದಾಗ ಸತೀಶ್ ಜಾರಕಿಹೊಳಿ, ಕೋರ್ಟ್ ಒಂದೇ ಕಾಂಗ್ರೆಸ್ ಮುಂದಿರುವ ದಾರಿ ಎಂದು ಹೇಳಿದರು. ಸಂಪುಟ ಪುನಾರಚನೆ ಮತ್ತು ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಕೇವಲ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು ಎಂದು ಸಚಿವ ಜಾರಕಿಹೊಳಿ ಪುನರುಚ್ಛಿಸಿದರು .

ಹುಬ್ಬಳ್ಳಿ, ಏಪ್ರಿಲ್ 16: ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರವನ್ನು (Siddaramaiah government) ಉರುಳಿಸುವ ಪ್ರಯತ್ನಗಳು ನಡೆಯುತ್ತಿವೆ, ರಾಜ್ಯ ಕಾಂಗ್ರೆಸ್ ನಾಯಕರ ನಡುವೆ ಏನೇ ಭಿನ್ನಭಿಪ್ರಾಯಳಿದ್ದರು ಪಕ್ಷದ ಚೌಕಟ್ಟಿನೊಳಗೆ ಮಾತ್ರ ಪ್ರಸ್ತಾಪಿಸಬೇಕು, ಎಲ್ಲ ನಾಯಕರು ಎಚ್ಚರದಿಂದಿರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿರವುದನ್ನು ಸಚಿವ ಸತೀಶ್ ಜಾರಕಿಹೊಳಿ ಮುಂದೆ ಪ್ರಸ್ತಾಪಿಸಿದಾಗ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಉರುಳಿಸುವ ಪ್ರಯತ್ನಗಳು ನಡೆದಿವೆ ಎಂದರು. ಅದರೆ, ಕಾಂಗ್ರೆಸ್ ಬುಟ್ಟಿಯಲ್ಲಿ 140 ಸೀಟುಗಳಿರುವುದರಿಂದ ಆತಂಕಪಡುವ ಅವಶ್ಯಕತೆಯಿಲ್ಲ ಎಂದು ಜಾರಕಿಹೊಳಿ ಹೇಳಿದರು.

ಇದನ್ನೂ ಓದಿ: ಡಿಕೆ ಶಿವಕುಮಾರ್ ಬದಲಾವಣೆಗೆ ಆಗ್ರಹಿಸಿಲ್ಲ: ಸತೀಶ್ ಜಾರಕಿಹೊಳಿ ದಿಢೀರ್ ಯೂಟರ್ನ್

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.