ಮಹಾರಾಷ್ಟ್ರದಲ್ಲಿ ತಾನು ಪ್ರಚಾರ ಮಾಡಿದ ಕ್ಷೇತ್ರಗಳ ಫಲಿತಾಂಶ ಗೊತ್ತಿಲ್ಲ ಅಂತ ಸಿದ್ದರಾಮಯ್ಯ ಹೇಳಿದಾಗ ಎಲ್ಲರೂ ನಕ್ಕರು!

ಅರುಣ್​ ಕುಮಾರ್​ ಬೆಳ್ಳಿ

Updated on: Nov 23, 2024 | 6:15 PM

ಕರ್ನಾಟಕದಲ್ಲಿ ತಮ್ಮ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆ ಮತ್ತು ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾರ್ಯಗಳಿಂದ ಜನ ಉಪ ಚುನಾವಣೆಯಲ್ಲಿ ತಮ್ಮ ಕೈ ಹಿಡಿದಿದ್ದಾರೆ ಎಂದು ಹೇಳಿದ ಸಿದ್ದರಾಮಯ್ಯ, ಈ ಫಲಿತಾಂಶಗಳಿಂದ ರಾಜ್ಯ ಸರ್ಕಾರ ಮತ್ತು ತಮ್ಮ ಮೇಲಿರುವ ಅರೋಪಗಳಿಗೆ ಕ್ಲೀನ್ ಚಿಟ್ ಪಡೆದುಕೊಳ್ಳುವ ಪ್ರಯತ್ನ ತಾನು ಮಾಡುತ್ತಿಲ್ಲ ಎಂದರು.

ಬೆಂಗಳೂರು: ವಿಧಾನಸಭಾ ಉಪ ಚುನಾವಣೆ ಬಳಿಕ ಸುದ್ದಿಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಭಾರೀ ಅಂತರದ ಜಯ ಗಳಿಸಿರುವ ಪ್ರಿಯಾಂಕಾ ಗಾಂಧಿ ವಾಡ್ರಾ ಅವರಿಗೆ ಅಭಿನಂದನೆ ಮತ್ತು ಗೆಲ್ಲಿಸಿದ ಮತದಾರರಿಗೆ ಧನ್ಯವಾದ ಸಲ್ಲಿಸಿದರು. ಜಾರ್ಖಂಡ್ ನಲ್ಲಿ ಇಂಡಿಯಾ ಒಕ್ಕೂಟ ಗೆಲುವು ಸಾಧಿಸಿದೆ ಮತ್ತು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್​ಗೆ ಹಿನ್ನಡೆಯಾಗಿದೆ, ತಾನು 4 ಲೋಕಸಭಾ ಕ್ಷೇತ್ರಗಳಲ್ಲಿ 2 ದಿನ ಪ್ರಚಾರಕ್ಕೆ ಹೋಗಿದ್ದೆ, ಆ ಕ್ಷೇತ್ರಗಳ ಫಲಿತಾಂಶ ಏನಾಗಿದೆ ಅಂತ ಗೊತ್ತಿಲ್ಲ, ಕಾಂಗ್ರೆಸ್ ಗೆದ್ದಿದೆಯಾ? ಎಂದು ಅವರು ವೇದಿಕೆ ಮೇಲಿದ್ದ ಯಾರನ್ನೋ ಮುಗುಳ್ನಗುತ್ತಾ ಕೇಳಿದಾಗ ಎಲ್ಲರೂ ಜೋರಾಗಿ ನಕ್ಕರು. ಅವರ ಎಡಭಾಗದಲ್ಲಿದ್ದ ಸಚಿವ ಸಂತೋಷ್ ಲಾಡ್ ಬಾಯಿಗೆ ಕೈ ಅಡ್ಡ ಇಟ್ಟು ನಕ್ಕರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕ್ವೆಸ್ಟ್ ಅಕಾಡೆಮಿಯ ಕನ್ನಡ ಅನುವಾದವನ್ನು ಪರಮೇಶ್ವರ್ ಅವರಿಂದ ಕೇಳಿ ತಿಳಿದುಕೊಂಡ ಸಿದ್ದರಾಮಯ್ಯ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.