ಯಾರನ್ನು ಕೇಳಿದ್ರೂ ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಅಂತಿದ್ದಾರೆ, ನಾವೂ ಅದ್ನೇ ಹೇಳ್ತೀವಿ: ಜಿ ಪರಮೇಶ್ವರ!

Updated on: May 01, 2026 | 11:35 AM

ಜಿ ಪರಮೇಶ್ವರ ಅವರು ಐದು ರಾಜ್ಯಗಳ ಚುನಾವಣಾ ಫಲಿತಾಂಶಗಳ ಕುರಿತು ಮಾತನಾಡಿದ್ದಾರೆ. ಕೇರಳ, ತಮಿಳುನಾಡಿನಲ್ಲಿ ಕಾಂಗ್ರೆಸ್-ಯುಡಿಎಫ್/ಡಿಎಂಕೆ ಮೈತ್ರಿಕೂಟಕ್ಕೆ ವಿಶ್ವಾಸ ವ್ಯಕ್ತಪಡಿಸಿದ್ದು, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಅವಕಾಶವಿದೆ ಎಂದು ಹೇಳಿದ್ದಾರೆ. ಅಸ್ಸಾಂನಲ್ಲಿ ಬಿಜೆಪಿ ಗೆಲುವು ನಿರೀಕ್ಷಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗಳಿಗೆ ಗೌರವ ನೀಡುವುದಾಗಿ ತಿಳಿಸಿದ್ದಾರೆ.

ಬೆಂಗಳೂರು, ಮೇ 1: ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಷ್ಟೇನೂ ಆಶಾವಾದಿಯಾಗಿಲ್ಲ. ಸಮೀಕ್ಷೆಗಳು ಮಾತ್ರವಲ್ಲ, ಜನರೂ ಎಲ್ಲರೂ ಅಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಹೇಳುತ್ತಿದ್ದಾರೆ. ನಾವೂ ಹಾಗೆಯೇ ಭಾವಿಸಿದ್ದೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಅಸ್ಸಾಂನಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಸಮೀಕ್ಷೆಗಳು ಹೇಳುತ್ತಿವೆ ಮತ್ತು ನಮ್ಮೊಂದಿಗೆ ಮಾತನಾಡಿದವರೂ ಇದನ್ನೇ ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಕೇರಳದಲ್ಲಿ ಯುಡಿಎಫ್ ಸರ್ಕಾರ ಅಧಿಕಾರಕ್ಕೆ ಬರುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದ ಅವರು, ಕೆಲವು ಅಧಿಕಾರಿಗಳು ಹಾಗೂ ಅಬ್ಸರ್ವರ್‌ಗಳ ಮಾತುಕತೆಯಿಂದ ತಿಳಿದು ಬಂದ ಪ್ರಕಾರ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಅಧಿಕಾರಕ್ಕೆ ಬರುವ ಅವಕಾಶವಿದೆ ಎಂದು ಹೇಳಿದ್ದಾರೆ. ಮಾಧ್ಯಮ ವರದಿಗಳು ಮತ್ತು ಅವರ ಜನಪ್ರಿಯತೆಯನ್ನು ಗಮನಿಸಿದರೆ ಅವರು ಮತ್ತೆ ಅಧಿಕಾರಕ್ಕೆ ಬರಬಹುದು ಎಂದಿದ್ದಾರೆ. ತಮಿಳುನಾಡಿನಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಪರಮೇಶ್ವರ ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More