AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

'ಸಿಎಂ ಸೇರಿ ತನ್ನ ಫೋನ್​​ ಕೂಡ ಕದ್ದಾಲಿಕೆ ಆಗುತ್ತವೆ': ಸ್ಫೋಟಕ ಆರೋಪ ಮಾಡಿದ ಪ್ರಿಯಾಂಕ್​​ ಖರ್ಗೆ

‘ಸಿಎಂ ಸೇರಿ ತನ್ನ ಫೋನ್​​ ಕೂಡ ಕದ್ದಾಲಿಕೆ ಆಗುತ್ತವೆ’: ಸ್ಫೋಟಕ ಆರೋಪ ಮಾಡಿದ ಪ್ರಿಯಾಂಕ್​​ ಖರ್ಗೆ

ಸುನಿಲ್​ ಎಮ್​ ಹೆಚ್​
| Edited By: |

Updated on:Nov 16, 2026 | 12:43 PM

Share

ರಾಹುಲ್ ಗಾಂಧಿ ಮಾಡಿರುವ ಫೋನ್ ಕದ್ದಾಲಿಕೆ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ, ಮುಖ್ಯಮಂತ್ರಿಗಳೂ ಸೇರಿದಂತೆ ಎಲ್ಲರ ಫೋನ್‌ಗಳೂ ಕದ್ದಾಲಿಕೆ ಆಗುತ್ತವೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದು ಪೆಗಾಸಸ್ ಸ್ಪೈವೇರ್ ಬಳಕೆಯ ಮೂಲಕ ವಿರೋಧ ಪಕ್ಷಗಳನ್ನು ನಿಯಂತ್ರಿಸುವ "ಗುಜರಾತ್ ಮಾದರಿ"ಯ ಭಾಗವಾಗಿದೆ ಎಂದೂ ಅವರು ಆಪಾದಿಸಿದ್ದಾರೆ.

ಬೆಂಗಳೂರು, ನವೆಂಬರ್​​ 16: ಪ್ರಧಾನಿ ಮೋದಿ ತಮ್ಮ ಫೋನ್​​ ಕದ್ದಾಲಿಕೆ ಮಾಡುತ್ತಿದ್ದಾರೆಂಬ ಲೋಕಸಭೆ ವಿಪಕ್ಷ ನಾಯಕ ರಾಹುಲ್​​ ಗಾಂಧಿ ಆರೋಪ ಸಂಬಂಧ ಪ್ರತಿಕ್ರಿಯಿಸಿರುವ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ, ಮುಖ್ಯಮಂತ್ರಿಗಳು ಸೇರಿದಂತೆ ಪ್ರತಿಯೊಬ್ಬರ ಫೋನ್‌ಗಳೂ ಕದ್ದಾಲಿಕೆ ಆಗುತ್ತವೆ ಎಂದು ಸ್ಫೋಟಕ ಆರೋಪ ಮಾಡಿದ್ದಾರೆ. ಗೃಹ ಸಚಿವರಾಗಿರುವ ತಮ್ಮ ಫೋನ್ ಕೂಡ ಕದ್ದಾಲಿಕೆ ಆಗುತ್ತದೆ ಎಂದು ಅವರು ದೂರಿದ್ದಾರೆ. ಪೆಗಾಸಸ್ ಸ್ಪೈವೇರ್ ಖರೀದಿ ಮತ್ತು ಅದರ ಬಳಕೆಯ ಕುರಿತೂ ಪ್ರಶ್ನಿಸಿರುವ ಪ್ರಿಯಾಂಕ್​​, ಇದು ವಿರೋಧ ಪಕ್ಷಗಳನ್ನು ಹತ್ತಿಕ್ಕಲು ಬಳಸಲಾಗುವ “ಗುಜರಾತ್ ಮಾದರಿ” ಎಂದಿದ್ದಾರೆ. ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರ ಯಾವುದೇ ಸಾಧನೆ ಮಾಡಿಲ್ಲ. ನಿರುದ್ಯೋಗ, ಚೀನಾ, ಪಾಕಿಸ್ತಾನದೊಂದಿಗಿನ ಸಂಬಂಧಗಳ ವೈಫಲ್ಯದಂತಹ ಸಮಸ್ಯೆಗಳನ್ನು ಪ್ರಶ್ನಿಸುವ ವಿರೋಧ ಪಕ್ಷಗಳನ್ನು ಹೆದರಿಸಲು ಮತ್ತು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಿಯಾಂಕ್​ ಆರೋಪಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Nov 16, 2026 12:34 PM

Follow Us
ಸುನಿಲ್​ ಎಮ್​ ಹೆಚ್​
ಸುನಿಲ್​ ಎಮ್​ ಹೆಚ್​