ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
‘ಬಿಗ್ ಬಾಸ್’ ಶೋ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಮಾಜಿ ಬಿಗ್ ಬಾಸ್ ಸ್ಪರ್ಧಿ ವಿನಯ್ ಗೌಡ ಈ ಕುರಿತು ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸುದೀಪ್ ಅವರ ನಿರೂಪಣೆ ಬಗ್ಗೆ ಕೆಲವರು ಪ್ರಶ್ನೆ ಮಾಡಿದ್ದಾರೆ. ಅಂಥವರಿಗೆ ವಿನಯ್ ಗೌಡ ಖಡಕ್ ತಿರುಗೇಟು ನೀಡಿದ್ದಾರೆ.
‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ಶೋ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬಹಳ ಚರ್ಚೆ ಆಗುತ್ತಿದೆ. ಮಾಜಿ ಬಿಗ್ ಬಾಸ್ ಸ್ಪರ್ಧಿ ವಿನಯ್ ಗೌಡ ಅವರು ಈ ಕುರಿತು ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರು ಕಿಚ್ಚ ಸುದೀಪ್ (Kichcha Sudeep) ಅವರ ನಿರೂಪಣೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಅಂಥವರಿಗೆ ವಿನಯ್ ಗೌಡ ಅವರು ಖಡಕ್ ತಿರುಗೇಟು ನೀಡಿದ್ದಾರೆ. ‘ಶೋನಲ್ಲಿ ಯಾರಿಗೆ ಬೈಯ್ಯಬೇಕು, ಯಾರಿಗೆ ಬೈಯ್ಯಬಾರದು ಎಂಬುದನ್ನು ಸುದೀಪ್ ಅವರಿಗೆ ಯಾರೂ ಹೇಳಿಕೊಟ್ಟು ಮಾಡಿಸುವುದಿಲ್ಲ. ಪ್ರತಿಯೊಂದನ್ನೂ ಸುದೀಪ್ ಸರ್ ನೋಡುತ್ತಾರೆ. ಅವರಿಗೆ ಅರಿವು ಇದೆ. ಇಷ್ಟು ವರ್ಷ ಸುಮ್ಮನೇ ಬಿಗ್ ಬಾಸ್ ನಡೆಸಿಕೊಂಡು ಬಂದಿಲ್ಲ. ಯಾವ ಪ್ರಶ್ನೆ ಕೇಳಬೇಕು, ಯಾವ ಪ್ರಶ್ನೆ ಕೇಳಬಾರದು ಎಂಬುದು ಅವರಿಗೆ ಚೆನ್ನಾಗಿ ಗೊತ್ತಿದೆ’ ಎಂದು ವಿನಯ್ ಗೌಡ (Vinay Gowda) ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
