ಹೆಚ್.ಡಿ. ದೇವೇಗೌಡರ ಭೇಟಿಯಾದ ಬಿ.ಎಸ್. ಯಡಿಯೂರಪ್ಪ: ತೀವ್ರ ಕುತೂಹಲ ಮೂಡಿಸಿದ ರಾಜಕೀಯ ಧುರೀಣರ ನಡೆ
ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಭೇಟಿ ವೇಳೆ ಹೂಗುಚ್ಛ ನೀಡಿ ದೇವೇಗೌಡರು ಯಡಿಯೂರಪ್ಪ ಅವರನ್ನು ಸ್ವಾಗತಿಸಿದ್ದರೆ, ದೇವೇಗೌಡರಿಗೆ ಶಾಲು ಹೊದೆಸಿ ಬಿಎಸ್ವೈ ಗೌರವಿಸಿದ್ದಾರೆ. ರಾಜಕೀಯ ಧುರೀಣರ ಈ ಭೇಟಿ ಭಾರಿ ಕುತೂಹಲ ಮೂಡಿಸಿದೆ.
ಬೆಂಗಳೂರು, ಅಕ್ಟೋಬರ್ 30: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಅಭೂತಪೂರ್ವ ಗೆಲುವಿನ ಬೆನ್ನಲ್ಲೇ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಶಾಸಕರಾದ ಸಿ.ಕೆ.ರಾಮಮೂರ್ತಿ, ಎಂ.ಕೃಷ್ಣಪ್ಪ ಈ ವೇಳೆ ಉಪಸ್ಥಿತರಿದ್ದರು. ಭೇಟಿ ವೇಳೆ ಹೂಗುಚ್ಛ ನೀಡಿ ದೇವೇಗೌಡರು ಯಡಿಯೂರಪ್ಪ ಅವರನ್ನು ಸ್ವಾಗತಿಸಿದ್ದರೆ, ದೇವೇಗೌಡರಿಗೆ ಶಾಲು ಹೊದೆಸಿ ಬಿಎಸ್ವೈ ಗೌರವಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Oct 30, 2026 06:45 PM
Follow Us
Latest Videos

