ಹೆಚ್​​.ಡಿ. ದೇವೇಗೌಡರ ಭೇಟಿಯಾದ ಬಿ.ಎಸ್​​. ಯಡಿಯೂರಪ್ಪ: ತೀವ್ರ ಕುತೂಹಲ ಮೂಡಿಸಿದ ರಾಜಕೀಯ ಧುರೀಣರ ನಡೆ

Edited By:

Updated on: Oct 30, 2026 | 6:46 PM

ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಭೇಟಿ ವೇಳೆ ಹೂಗುಚ್ಛ ನೀಡಿ ದೇವೇಗೌಡರು ಯಡಿಯೂರಪ್ಪ ಅವರನ್ನು ಸ್ವಾಗತಿಸಿದ್ದರೆ, ದೇವೇಗೌಡರಿಗೆ ಶಾಲು ಹೊದೆಸಿ ಬಿಎಸ್​​ವೈ ಗೌರವಿಸಿದ್ದಾರೆ. ರಾಜಕೀಯ ಧುರೀಣರ ಈ ಭೇಟಿ ಭಾರಿ ಕುತೂಹಲ ಮೂಡಿಸಿದೆ.

ಬೆಂಗಳೂರು, ಅಕ್ಟೋಬರ್​​ 30: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಪರಿಷತ್​​ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್​​ ಮೈತ್ರಿಗೆ ಅಭೂತಪೂರ್ವ ಗೆಲುವಿನ ಬೆನ್ನಲ್ಲೇ ಮಾಜಿ ಸಿಎಂ ಬಿ.ಎಸ್​​. ಯಡಿಯೂರಪ್ಪ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್​​.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಶಾಸಕರಾದ ಸಿ.ಕೆ.ರಾಮಮೂರ್ತಿ, ಎಂ.ಕೃಷ್ಣಪ್ಪ ಈ ವೇಳೆ ಉಪಸ್ಥಿತರಿದ್ದರು. ಭೇಟಿ ವೇಳೆ ಹೂಗುಚ್ಛ ನೀಡಿ ದೇವೇಗೌಡರು ಯಡಿಯೂರಪ್ಪ ಅವರನ್ನು ಸ್ವಾಗತಿಸಿದ್ದರೆ, ದೇವೇಗೌಡರಿಗೆ ಶಾಲು ಹೊದೆಸಿ ಬಿಎಸ್​​ವೈ ಗೌರವಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Oct 30, 2026 06:45 PM
Loading...
Unable to load recommendations.
Follow Us
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More