ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನಾನು ಅವತ್ತು ಆಡಿದ ಮಾತು ಸತ್ಯವಾಗಿದೆ ಎಂದ ಬಿ.ಎಸ್.ಯಡಿಯೂರಪ್ಪ
ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆಯಾಗಿದೆ. ಈ ತೀರ್ಪನ್ನು ಸ್ವಾಗತಿಸಿರುವ ಬಿ.ಎಸ್. ಯಡಿಯೂರಪ್ಪ, ಅಂದು ನಾನಾಡಿದ್ದ ಮಾತುಗಳು ಸತ್ಯವಾಗಿವೆ. ಹೀಗಿದ್ದರೂ ಈ ರೀತಿಯ ಘಟನೆಗಳು ನಡೆಯಬಾರದಿತ್ತು. ಯೋಗೀಶ್ ಗೌಡ ಕುಟುಂಬಕ್ಕೆ ದೇವರು ಶಕ್ತಿ ನೀಡಲಿ ಎಂದಿದ್ದಾರೆ. ಕೊಲೆ ಪ್ರಕರಣದ ತನಿಖೆಯನ್ನು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವೇ ಸಿಬಿಐಗೆ ನೀಡಿತ್ತು ಎನ್ನುವುದಿಲ್ಲಿ ಗಮನಾರ್ಹ.
ಚಿಕ್ಕಮಗಳೂರು, ಏಪ್ರಿಲ್ 17: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ ಸಂಬಂಧ ಧಾರವಾದ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಾನು ಅವತ್ತು ಆಡಿದ ಮಾತು ಸತ್ಯವಾಗಿದೆ ಎಂದಿದ್ದಾರೆ. ಅಲ್ಲದೆ ಯೋಗೀಶ್ ಗೌಡ ಕುಟುಂಬಕ್ಕೆ ದೇವರು ಶಕ್ತಿ ನೀಡಲಿ ಎಂದು ತಿಳಿಸಿದ್ದಾರೆ. ಆರಂಭದಲ್ಲಿ ಸ್ಥಳೀಯ ಪೊಲೀಸರು ಇದನ್ನು ಜಮೀನು ವಿವಾದವೆಂದು ತನಿಖೆ ಮಾಡಿದ್ದರು. ನಂತರ ಯೋಗೀಶ್ ಗೌಡ ಕುಟುಂಬದ ಒತ್ತಾಯದ ಮೇರೆಗೆ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಈ ಪ್ರಕರಣವನ್ನು CBI (ಸಿಬಿಐ) ತನಿಖೆಗೆ ವಹಿಸಿತ್ತು ಎಂಬುದಿಲ್ಲಿ ಗಮನಾರ್ಹ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Apr 17, 2026 05:46 PM
Follow Us
Latest Videos
ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ
ಗಾಜಿಯಾಬಾದ್ನಲ್ಲಿ ಗುಡಿಸಲುಗಳು ಬೆಂಕಿಗಾಹುತಿ; ಪೆಟಾದಿಂದ ಪ್ರಾಣಿಗಳ ರಕ್ಷಣೆ
ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್
ಪ್ರಧಾನಿ ಮೋದಿ ಮತ್ತು ನನಗೆ ಇಬ್ರಿಗೂ ‘ಹೆಂಡತಿ’ ಕಾಟ ಇಲ್ಲ : ರಾಹುಲ್ ಗಾಂಧಿ

