‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’:ಪರಮಾಪ್ತ ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ

Updated on: Jun 11, 2026 | 2:48 PM

ಜಮೀರ್ ಅಹ್ಮದ್ ಖಾನ್ ಅವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಅವರ ಬೆಂಬಲಿಗರು ಸಿದ್ದರಾಮಯ್ಯವರನ್ನು ಭೇಟಿ ಮಾಡಿ ಒತ್ತಾಯಿಸಿದ್ದು, ಈ ವೇಳೆ ಗಂರ ಆದ ಸಿದ್ದರಾಮಯ್ಯ, ಅವನು (ಜಮೀರ್ ಅಹ್ಮದ್ ಖಾನ್) ನನ್ನ ಆಪ್ತ ಎಂದು ನೀವೆಲ್ಲಾ ಹೇಳುತ್ತೀರಾ. ಆದ್ರೆ, ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ ಎಂದು ಸಿಡಿಮಿಡಿಗೊಂಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಮೊದಲೇ ಆಡಿಯೋವೊಂದು ವೈರಲ್ ಆಗಿರುವುದು ಜಮೀರ್ ಅಹ್ಮದ್ ಮೇಲೆ ಪಕ್ಷ ವಿರೋಧಿ ಆರೋಪ ಕೇಳಿಬಂದಿದ್ದು, ಇದರ ನಡುವೆ ಇದೀಗ ಸಿದ್ದರಾಮಯ್ಯ ಹೇಳಿಕೆ ಭಾರೀ ಸಂಚಲನಕ್ಕೆ ಕಾರಣವಾಗಿದೆ.

ಬೆಂಗಳೂರು, (ಜೂನ್ 11): ರಾಜಕೀಯದಲ್ಲಿ ಯಾರು ಯಾರಿಗೂ ಶತ್ರುಗಳಲ್ಲ, ಮಿತ್ರರಲ್ಲ ಎಂಬ ಮಾತಿದೆ. ಇದಕ್ಕೆ ಪೂರಕವೆಂಬಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಪರಮಾಪ್ತ ಜಮೀರ್ ಅಹ್ಮದ್ ಖಾನ್ ವಿರುದ್ಧೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರಿಂದಲೇ ಜಮಿರ್ ಅಹ್ಮದ್ ಖಾನ್ ಅವರಿಗೆ ಮಂತ್ರಿ ಸ್ಥಾನ ಕೈತಪ್ಪಿದೆ ಎನ್ನಲಾಗುತ್ತಿದೆ. ಹೌದು..ಜಮೀರ್ ಅಹ್ಮದ್ ಖಾನ್ ಅವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಅವರ ಬೆಂಬಲಿಗರು ಸಿದ್ದರಾಮಯ್ಯವರನ್ನು ಭೇಟಿ ಮಾಡಿ ಒತ್ತಾಯಿಸಿದ್ದು, ಈ ವೇಳೆ ಗಂರ ಆದ ಸಿದ್ದರಾಮಯ್ಯ, ಅವನು (ಜಮೀರ್ ಅಹ್ಮದ್ ಖಾನ್) ನನ್ನ ಆಪ್ತ ಎಂದು ನೀವೆಲ್ಲಾ ಹೇಳುತ್ತೀರಾ. ಆದ್ರೆ, ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ ಎಂದು ಸಿಡಿಮಿಡಿಗೊಂಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಮೊದಲೇ ಆಡಿಯೋವೊಂದು ವೈರಲ್ ಆಗಿರುವುದು ಜಮೀರ್ ಅಹ್ಮದ್ ಮೇಲೆ ಪಕ್ಷ ವಿರೋಧಿ ಆರೋಪ ಕೇಳಿಬಂದಿದ್ದು, ಇದರ ನಡುವೆ ಇದೀಗ ಸಿದ್ದರಾಮಯ್ಯ ಹೇಳಿಕೆ ಭಾರೀ ಸಂಚಲನಕ್ಕೆ ಕಾರಣವಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jun 11, 2026 02:47 PM
Follow Us