ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ

ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ

ಬಿ ಮೂರ್ತಿ, ನೆಲಮಂಗಲ
| Updated By: ಗಂಗಾಧರ​ ಬ. ಸಾಬೋಜಿ

Updated on:Jan 05, 2025 | 6:28 PM

ಬೆಂಗಳೂರಿನ ಚಿಕ್ಕಬಿದರಕಲ್ಲು ಗ್ರಾಮದ 25 ವರ್ಷದ ಯುವತಿಯೊಬ್ಬಳು ತನ್ನ ಮಾಜಿ ಪ್ರೇಮಿಯಿಂದ ಕಿರುಕುಳಕ್ಕೆ ಒಳಗಾಗಿದ್ದಾಳೆ. ಆಕೆಯ ಡಿಯೋ ಬೈಕ್ ಅನ್ನು ಯುವಕ ಕಳವು ಮಾಡಿ, ಬಳಿಕ ಜಖಂಗೊಳಿಸಿ ಅದೇ ಸ್ಥಳದಲ್ಲಿ ತಂದು ನಿಲ್ಲಿಸಿದ್ದಾನೆ. ಯುವತಿ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ನೆಲಮಂಗಲ, ಜನವರಿ 05: ಮಾಜಿ ಲವರ್​​ನಿಂದ ಯುವತಿಗೆ (girl) ಕಿರುಕುಳ ನೀಡಿದ್ದಲ್ಲದೇ ಅವಳ ಬೈಕ್​ ಕದ್ದು, ಒಂದು ದಿನದ ಬಳಿಕ ಜಖಂಗೊಳಿಸಿ ಅದೇ ಜಾಗದಲ್ಲಿ ತಂದು ನಿಲ್ಲಿಸಿ ಪರಾರಿ ಆಗಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಬೆಂಗಳೂರಿನ ಚಿಕ್ಕಬಿದರಕಲ್ಲು ಗ್ರಾಮದ ಸುನೀಲ್ ಗೌಡನಿಂದ ಕಿರುಕುಳ ಆರೋಪ ಮಾಡಲಾಗಿದೆ. ನಿಲ್ಲಿಸಿದ್ದ ಬೈಕ್ ಕದಿಯುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಬೇರೊಬ್ಬ ಯುವಕನ ಜೊತೆ ಸಂಬಂಧ ಆರೋಪ ಮೇರೆಗೆ ಇಬ್ಬರ ಮಧ್ಯೆ ಬ್ರೇಕ್ ಆಪ್​ ಆಗಿತ್ತು. ಕಿರುಕುಳ ಸಂಬಂಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Jan 05, 2025 06:24 PM