ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ ಬಗ್ಗೆ ತೇಜಸ್ವಿನಿ ಗೌಡ ಹೇಳಿದಿಷ್ಟು
ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಎಂಎಲ್ಸಿ ತೇಜಸ್ವಿನಿ ಗೌಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಟಿವಿ9 ಜೊತೆ ಮಾತನಾಡಿದ ತೇಜಸ್ವಿನಿ ಗೌಡ ತಾವು ಪಕ್ಷ ತೊರೆದ ಬಗ್ಗೆ ಮಾತನಾಡಿದರು. ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಮಾಜಿ ಎಂಎಲ್ಸಿ ತೇಜಸ್ವಿನಿ ಗೌಡ (Tejaswini Gowda) ಬಿಜೆಪಿ ತೊರೆದು ಕಾಂಗ್ರೆಸ್ (Congress) ಸೇರ್ಪಡೆಯಾಗಿದ್ದಾರೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ತೇಜಸ್ವಿನಿ ಗೌಡ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಈ ವೇಳೆ ಟಿವಿ9 ಜೊತೆ ಮಾತನಾಡಿದ ತೇಜಸ್ವಿನಿ ಗೌಡ ತಾವು ಪಕ್ಷ ತೊರೆದ ಬಗ್ಗೆ ಮಾತನಾಡಿದರು. ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಬಿಜೆಪಿ ಕೊಟ್ಟ ಕೆಲಸವನ್ನು ನಿಷ್ಠೆಯಿಂದ ಮಾಡಿದ್ದೇನೆ. ಬಿಜೆಪಿಗೆ ರಾಜಕೀಯ ಬರಗಾಲ ಇತ್ತು ಆಗ ನಾನು ಬಿಜೆಪಿ ಸೇರಿದ್ದೆ. ನರೇಂದ್ರ ಮೋದಿಯವರು ಗುಜರಾತ್ ಸಿಎಂ ಆಗಿದ್ದರು, ಪ್ರಧಾನಿ ಆಗಿರಲಿಲ್ಲ. ಈಗ ಬಿಜೆಪಿ ಸಮೃದ್ಧವಾಗಿದೆ, ಬಿಜೆಪಿ ಬಿಟ್ಟು ಬಂದಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ನಿಜವಾಗಲು ಬರಗಾಲ ಇದೆ, ಕಷ್ಟದ ಪರಿಸ್ಥಿತಿ ಇದೆ. ಡಿಕೆ ಶಿವಕುಮಾರ್ ಅವರು ಒಕ್ಕಲಿಗ ಸಮುದಾಯ ನಾಯಕ. ಬಿಜೆಪಿಯಲ್ಲಿರುವ ಒಕ್ಕಲಿಗ ಸಮುದಾಯದ ನಾಯಕರನ್ನು ತುಳಿಯಲಾಗಿದೆ. ಪ್ರತಾಪ್ ಸಿಂಹ, ಸಿ.ಟಿರವಿ, ಸದಾನದಂದಗೌಡರಿಗೆ ಟಿಕೆಟ್ ಕೊಟ್ಟಿಲ್ಲ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?

