ಸ್ಟ್ರಾಂಗ್‌ ರೂಮ್‌ ಬೀಗ ಕಳೆದಿರೋದು ನಾವು ಎಂದೂ ಕೇಳಿಲ್ಲ: ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಮಾಜಿ ಎಂಪಿ ಹೇಳಿದ್ದಿಷ್ಟು

Edited By:

Updated on: May 07, 2026 | 5:40 PM

ತೀವ್ರ ಜಿದ್ದಾಜಿದ್ದಿಯಿಂದ ಕೂಡಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು ಸಾಧಿಸಿದ್ದಾರೆ. ಆದ್ರೆ, ಮತ ಎಣಿಕೆ ಆರಂಭದಲ್ಲಿ ಸ್ಟ್ರಾಂಗ್ ರೂಮ್ ಬೀಗಗಳು ಕಾಣೆಯಾಗಿದ್ದವು. ಇದರಿಂದ ಗೊಂದಲ ಉಂಟಾಗಿ, ಅಧಿಕಾರಿಗಳು ಅಭ್ಯರ್ಥಿಗಳ ಏಜೆಂಟರ ಸಮ್ಮುಖದಲ್ಲಿ ಬೀಗಗಳನ್ನು ಮುರಿದು ಸ್ಟ್ರಾಂಗ್ ರೂಮ್ ತೆರೆದು ಮತ ಎಣಿಕೆ ಮಾಡಿದ್ದು, ಇದೀಗ ಬಿಜೆಪಿಗರ ಅನುಮಾನಕ್ಕೆ ಕಾರಣವಾಗಿದೆ. ಇನ್ನು ತಮ್ಮ ಪಕ್ಷದ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಸೋಲಿನ ಬಗ್ಗೆ ಮಾಜಿ ಸಂಸದ ಜಿಎಮ್ ಸಿದ್ದೇಶ್ವರ್ ಪ್ರತಿಕ್ರಿಯಿಸಿದ್ದು, ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ ಅಂತೆಲ್ಲಾ ಹೇಳಿದ್ದಾರೆ.

ದಾವಣಗೆರೆ, (ಮೇ 07): ತೀವ್ರ ಜಿದ್ದಾಜಿದ್ದಿಯಿಂದ ಕೂಡಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ (Davanagere South By Election) ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು ಸಾಧಿಸಿದ್ದಾರೆ. ಆದ್ರೆ, ಮತ ಎಣಿಕೆ ಆರಂಭದಲ್ಲಿ ಸ್ಟ್ರಾಂಗ್ ರೂಮ್ ಬೀಗಗಳು ಕಾಣೆಯಾಗಿದ್ದವು. ಇದರಿಂದ ಗೊಂದಲ ಉಂಟಾಗಿ, ಅಧಿಕಾರಿಗಳು ಅಭ್ಯರ್ಥಿಗಳ ಏಜೆಂಟರ ಸಮ್ಮುಖದಲ್ಲಿ ಬೀಗಗಳನ್ನು ಮುರಿದು ಸ್ಟ್ರಾಂಗ್ ರೂಮ್ ತೆರೆದು ಮತ ಎಣಿಕೆ ಮಾಡಿದ್ದು, ಇದೀಗ ಬಿಜೆಪಿಗರ ಅನುಮಾನಕ್ಕೆ ಕಾರಣವಾಗಿದೆ. ಇನ್ನು ತಮ್ಮ ಪಕ್ಷದ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಸೋಲಿನ ಬಗ್ಗೆ ಮಾಜಿ ಸಂಸದ ಜಿಎಮ್ ಸಿದ್ದೇಶ್ವರ್ ಪ್ರತಿಕ್ರಿಯಿಸಿದ್ದು, ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ ಅಂತೆಲ್ಲಾ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More