‘ನಾನೇ ಕಾರಣ ಅನಿಸುತ್ತೆ’; ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರು ಸಂತೋಷ್​ಗೆ ಮಾತ್ರ

Updated on: Dec 11, 2023 | 9:49 AM

ಬಿಗ್ ಬಾಸ್​ ನೀಡಿದ ಟಾಸ್ಕ್​ನಲ್ಲಿ ಪ್ರತಾಪ್ ಹಾಗೂ ಸಂಗೀತಾ ಕಣ್ಣಿಗೆ ಹಾನಿ ಆಗಿದೆ. ಈ ಬಗ್ಗೆ ಯಾರಿಗೆ ಮರುಕವೂ ಇಲ್ಲ. ಈ ವಿಚಾರದಲ್ಲಿ ಹೆಚ್ಚು ತಪ್ಪಿತಸ್ಥ ಭಾವನೆ ಕಾಡುತ್ತಿರುವುದು ವರ್ತೂರು ಸಂತೋಷ್ ಅವರಿಗೆ ಮಾತ್ರ.

ಬಿಗ್ ಬಾಸ್​ ನೀಡಿದ ಟಾಸ್ಕ್​ನಲ್ಲಿ ಪ್ರತಾಪ್ ಹಾಗೂ ಸಂಗೀತಾ ಕಣ್ಣಿಗೆ ಹಾನಿ ಆಗಿದೆ. ಇದಕ್ಕೆ, ವಿನಯ್, ಮೈಕಲ್, ವರ್ತೂರು ಸಂತೋಷ್ (Varthur Santosh), ತುಕಾಲಿ ಸಂತೋಷ್ ಸೇರಿ ಅನೇಕರು ಕಾರಣ. ಆದರೆ, ಈ ವಿಚಾರದಲ್ಲಿ ವಿನಯ್ ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಅವರಿಗೆ ಈ ಬಗ್ಗೆ ಮರುಕವೂ ಇಲ್ಲ. ಈ ವಿಚಾರದಲ್ಲಿ ಹೆಚ್ಚು ತಪ್ಪಿತಸ್ಥ ಭಾವನೆ ಕಾಡುತ್ತಿರುವುದು ವರ್ತೂರು ಸಂತೋಷ್ ಅವರಿಗೆ ಮಾತ್ರ. ಕನ್​ಫೆಷನ್ ರೂಂಗೆ ಕರೆದು ಒಬ್ಬೊಬ್ಬರನ್ನೇ ಕರೆದು ಮನದಾಳದ ಮಾತನ್ನು ಹೇಳಿಕೊಳ್ಳಲು ಅವಕಾಶ ನೀಡಿದ್ದರು. ‘ಕನ್ನಡಕ ಹಾಕಿಕೊಂಡು ಓಡಾಡೋದು ನೋಡಿದ್ರೆ ನನಗೆ ಬೇಸರ ಆಗುತ್ತದೆ. ಅದಕ್ಕೆ ಕಾರಣ ನಾನು ಎನಿಸುತ್ತದೆ’ ಎಂದಿದ್ದಾರೆ ವರ್ತೂರು ಸಂತೋಷ್. ಜಿಯೋ ಸಿನಿಮಾದಲ್ಲಿ 24 ಗಂಟೆ ಶೋನ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Dec 11, 2023 08:59 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More