ಅರೆಸ್ಟ್ ಆಗಿದ್ದ ಅಬಕಾರಿ ಡಿಸಿಗೆ ನ್ಯಾಯಾಂಗ ಬಂಧನ: ಆಡಿಯೋ ರಿಲೀಸ್ ಮಾಡಿದ ಬಿಜೆಪಿ ನಾಯಕರು
ಮದ್ಯ ಪರವಾನಗಿ ಲಂಚ ಪ್ರಕರಣದಲ್ಲಿ ಅಬಕಾರಿ ಡಿಸಿ ಜಗದೀಶ್ ನಾಯಕ್, ಅಧೀಕ್ಷಕ ತಮ್ಮಣ್ಣ ಮತ್ತು ಕಾನ್ಸ್‌ಟೇಬಲ್ ಲಕ್ಕಪ್ಪ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 25 ಲಕ್ಷ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಬಂಧನವಾದ ಬೆನ್ನಲ್ಲೇ ಬಿಜೆಪಿ ನಾಯಕರು ಆಡಿಯೋ ರಿಲೀಸ್ ಮಾಡಿ, ಸಚಿವರ ಪಾತ್ರದ ಕುರಿತು ಗಂಭೀರ ಆರೋಪಗಳನ್ನು ಮಾಡಿದ್ದಾರೆ.
ಬೆಂಗಳೂರು, ಜನವರಿ 18: ಲಂಚ ಸ್ವೀಕರಿಸುತ್ತಿದ್ದ ಅಬಕಾರಿ ಡಿಸಿ ಲೋಕಾ ಬಲೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಆಯುಕ್ತ ಜಗದೀಶ್ ನಾಯಕ್, ಅಧೀಕ್ಷಕ ತಮ್ಮಣ್ಣ ಹಾಗೂ ಕಾನ್ಸ್‌ಟೇಬಲ್ ಲಕ್ಕಪ್ಪರಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬೈಯಪ್ಪನಹಳ್ಳಿಯ ಅಬಕಾರಿ ಕಚೇರಿಯಲ್ಲಿ ಮುಂಗಡವಾಗಿ 25 ಲಕ್ಷ ರೂ ಲಂಚ ಸ್ವೀಕರಿಸುವಾಗಲೇ ಜಗದೀಶ್ ನಾಯಕ್ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಮೈಕ್ರೋ ಬ್ರಿವೇರಿ ಸಿಎಲ್-7 ಪರವಾನಗಿಗಾಗಿ 75 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಇತ್ತ ನ್ಯಾಯಾಂಗ ಬಂಧನ ಬೆನ್ನಲ್ಲೇ ಬಿಜೆಪಿ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿ, ಅಬಕಾರಿ ಡಿಸಿ ಮತ್ತು ಪರವಾನಗಿ ಕೋರಿದ್ದವರ ನಡುವಿನ ಎನ್ನಲಾದ ಆಡಿಯೋ ಸಂಭಾಷಣೆ ಬಿಡುಗಡೆ ಮಾಡಿದ್ದಾರೆ. ಅಬಕಾರಿ ಲಂಚದಲ್ಲಿ ಸಚಿವರಿಗೂ ಪಾಲು ಹೋಗುತ್ತದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
