ದೇಶಕ್ಕೆ ಮೋದಿ ಕರ್ನಾಟಕಕ್ಕೆ ಜೆಸಿಬಿ: ಹೊಸ ಪಕ್ಷದ ಸುಳಿವು ಕೊಟ್ಟ ವಿಜಯಪುರ ಶಾಸಕ ಯತ್ನಾಳ್​​

Edited By:

Updated on: May 10, 2026 | 10:10 PM

ದೇಶಕ್ಕೆ ಮೋದಿ, ಕರ್ನಾಟಕಕ್ಕೆ ಜೆಸಿಬಿ ಎಂದು ಹೇಳುವ ಮೂಲಕ ಬಿಜೆಪಿ ಉಚ್ಛಾಟಿತ ಶಾಸಕ ಯತ್ನಾಳ್ ಹೊಸ ಪಕ್ಷ ಘೋಷಣೆಯ ಸುಳಿವು ನೀಡಿದ್ದಾರೆ. ತಮಿಳುನಾಡಲ್ಲಿ ಅಧಿಕಾರದ ಗದ್ದುಗೆ ಏರಿರುವ ವಿಜಯ್​ ನೇತೃತ್ವದ ನೂತನ ಪಕ್ಷ ಟಿವಿಕೆ ಉದಾಹರಣೆಯನ್ನು ನೀಡಿದ ಅವರು, ರಾಜ್ಯ ಪ್ರವಾಸ ಮಾಡೋದಾಗಿ ತಿಳಿಸಿದ್ದಾರೆ. ಜೊತೆಗೆ ನಿನ್ನೆ ನಡೆದಿದ್ದು ಬಿಎಸ್​​ವೈ ಅಭಿಮಾನೋತ್ಸವ ಅಲ್ಲ. ಬದಲಾಗಿ ಬೀಳ್ಕೊಡುಗೆ ಸಮಾರಂಭ ಎಂದು ಟೀಕಿಸಿದ್ದಾರೆ.

ವಿಜಯಪುರ, ಮೇ 10: ಎರಡು ವರ್ಷಗಳ ಹಿಂದೆ ಆರಂಭವಾದ ರಾಜಕೀಯ ಪಕ್ಷ ತಮಿಳುನಾಡಲ್ಲಿ ಅಧಿಕಾರಕ್ಕೆ ಬಂದಿದೆ. ಹೀಗಾಗಿ ರಾಜ್ಯದಲ್ಲಿ ಪ್ರವಾಸ ಆರಂಭಿಸಲಿದ್ದು, ಜನರು ಒಪ್ಪಿದ್ದರೆ ಕರ್ನಾಟಕದಲ್ಲಿ ಜೆಸಿಬಿ ಪಾರ್ಟಿ ರೆಡಿ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​ ತಿಳಿಸಿದ್ದಾರೆ. ಹೊಸ ಪಕ್ಷ ಘೋಷಣೆ ಯಾವಾಗ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಮೊದಲ ಹಂತದಲ್ಲಿ ಪ್ರವಾಸ ನಡೆಯಲಿದೆ. ದೇಶಕ್ಕೆ ಮೋದಿ ಕರ್ನಾಟಕಕ್ಕೆ ಜೆಸಿಬಿ ಎಂದವರು ತಿಳಿಸಿದ್ದಾರೆ. ಇದೇ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, ನಿನ್ನೆ ನಡೆದಿದ್ದು ಬಿಎಸ್​​ವೈ ಅಭಿಮಾನೋತ್ಸವ ಅಲ್ಲ. ಬದಲಾಗಿ ಬೀಳ್ಕೊಡುಗೆ ಸಮಾರಂಭ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More