ಡಿ.ಕೆ. ಶಿವಕುಮಾರ್ ತಂಡದ ಡಿನ್ನರ್ ಮೀಟಿಂಗ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೋಮಶೇಖರ್
ಡಿಕೆಶಿ ಬಣದ ನಾಯಕರ ಡಿನ್ನರ್ ಮೀಟಿಂಗ್ ಬಗ್ಗೆ ಬಿಜೆಪಿ ಉಚ್ಛಾಟಿತ ಶಾಸಕ ಎಸ್.ಟಿ. ಸೋಮಶೇಖರ್ ಮಾತನಾಡಿದ್ದು, ಡಿ.ಕೆ.ಶಿವಕುಮಾರ್ ಅವರ ಆಪ್ತರೊಂದಿಗೆ ನಡೆದ ಭೋಜನಕೂಟದಲ್ಲಿರಾಜಕೀಯ ಚರ್ಚೆ ನಡೆದಿಲ್ಲ. ಅಲ್ಲಿ ಮಟನ್, ಚಿಕನ್, ಬಿರಿಯಾನಿ ಬಗ್ಗೆ ಮಾತ್ರ ಚರ್ಚೆ ನಡೆಯಿತು ಎಂದಿದ್ದಾರೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಅವರ ಹಣೆಬರಹ ಹಾಗೂ ಹೈಕಮಾಂಡ್ ನಿರ್ಧಾರಿಸೋದಾಗಿ ತಿಳಿಸಿದ್ದಾರೆ.
ಬೆಳಗಾವಿ, ಡಿಸೆಂಬರ್ 12: ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಮಾಜಿ ಸಚಿವ, ಬಿಜೆಪಿ ಉಚ್ಛಾಟಿತ ಶಾಸಕ ಎಸ್.ಟಿ. ಸೋಮಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಆಪ್ತರೊಂದಿಗೆ ನಡೆದ ಭೋಜನಕೂಟದಲ್ಲಿ ರಾಜಕೀಯ ಚರ್ಚೆ ನಡೆದಿಲ್ಲ, ಊಟ ಚೆನ್ನಾಗಿತ್ತು. ಅಲ್ಲಿ ಮಟನ್, ಚಿಕನ್, ಬಿರಿಯಾನಿ ಬಗ್ಗೆ ಮಾತ್ರ ಚರ್ಚೆ ನಡೆಯಿತು ಎಂದಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ನಂಬರ್ ಗೇಮ್ ನಡೆಯುತ್ತಿದೆ ಎಂಬ ಊಹಾಪೋಹ ತಳ್ಳಿಹಾಕಿದ ಅವರು, ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದಿದ್ದಲ್ಲದೆ ಯಡಿಯೂರಪ್ಪ ಅವರ ಬದಲಾವಣೆಯನ್ನು ಉದಾಹರಣೆಯಾಗಿ ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಎಂಟು ಬಾರಿ ಶಾಸಕರಾಗಿ, ಹಲವು ಇಲಾಖೆಗಳ ಮಂತ್ರಿಯಾಗಿ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದಾರೆ. ಹೀಗಾಗಿ ಅವರಿಗೂ ಅವಕಾಶ ಸಿಗಬೇಕು ಎಂದಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
